ಸೌಜನ್ಯ ಕೇಸ್ನಲ್ಲಿ ಬಿಗ್ ಟ್ವಿಸ್ಟ್! – ವಿಠಲ ಗೌಡ ಆರೋಪಿ ಎಂದ ಸ್ನೇಹಮಯಿ ಕೃಷ್ಣ!

ಧರ್ಮಸ್ಥಳ ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟಿದ್ದು, ಸೌಜನ್ಯ ಮಾವ ವಿಠಲ ಗೌಡ ಅನ್ನೋದು ರಿವೀಲ್ ಆಗಿದೆ. ಇವೆಲ್ಲದ್ರ ನಡುವೆ ಸೌಜನ್ಯ ಕೇಸ್ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಇದೀಗ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸ್ಟೋಟಕ ಹೇಳಿಕೆ ನೀಡಿದ್ದಾರೆ. ಸೌಜನ್ಯಳ ಮಾವ ವಿಠಲ ಗೌಡ ಅವರೇ ಈ ಕೊಲೆಯನ್ನು ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ರಷ್ಯಾ ಜೊತೆ ಒಪ್ಪಂದ ಮಾಡಿಕೊಳ್ಳುವ ದೇಶಕ್ಕೆ ಸುಂಕ ಹಾಕುತ್ತಿರುವುದು ಸರಿ – ವೊಲೊಡಿಮಿರ್ ಝೆಲೆನ್ಸ್ಕಿ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಈ ಪ್ರಕರಣದ ಬಗ್ಗೆ ತಾವು ಸಂಗ್ರಹಿಸಿದ ಸಾಕ್ಷ್ಯಗಳನ್ನು ಆಧರಿಸಿ ವಿಠಲ ಗೌಡ ಅವರ ವಿರುದ್ಧ ದೂರು ನೀಡುವುದಾಗಿ ತಿಳಿಸಿದರು. ‘ಸೌಜನ್ಯ ಮತ್ತು ವಿಠಲ ಗೌಡ ನಡುವೆ ಅಸಭ್ಯ ವರ್ತನೆಗಳ ಬಗ್ಗೆ ನನಗೆ ಮಾಹಿತಿ ಇದೆ. ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದಾಗ ಸೌಜನ್ಯ ಕಿರುಚಿರಬಹುದು. ಆಗ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂಬ ಅನುಮಾನವಿದೆ ಎಂದಿದ್ದಾರೆ. ಈ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.
ವಿಠಲ ಗೌಡ ಸೌಜನ್ಯಳನ್ನು ಬೇರೆಡೆ ಕೊಲೆ ಮಾಡಿ ಆಕೆಯ ದೇಹವನ್ನು ಅಲ್ಲಿ ತಂದು ಎಸೆದಿದ್ದಾರೆ. ಈ ಕೃತ್ಯವನ್ನು ಸಂತೋಷ್ ರಾವ್ ನೋಡಿರಬಹುದು ಮತ್ತು ಅದಕ್ಕಾಗಿಯೇ ಆತನಿಗೆ ಬೆದರಿಕೆ ಹಾಕಿ ಸುಮ್ಮನಿರಿಸಲಾಗಿದೆ. ವಿಠಲ ಗೌಡರ ಮಂಪರು ಪರೀಕ್ಷೆ (ನಾರ್ಕೋ ಅನಾಲಿಸಿಸ್) ನಡೆಸಿದರೆ ಸತ್ಯ ಹೊರಬರಬಹುದು. ಹೀಗಾಗಿ ಈ ಪ್ರಕರಣವನ್ನು ಹೊಸ ಆಯಾಮಗಳಲ್ಲಿ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ. ಇದೀಗ ಸೌಜನ್ಯ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ನೀಡಿದ್ದು, ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದೆ.

ನೋಡಿರಿ

