ಫಂಗಸ್ ಬಂದಿದೆ.. ಬಟ್ಟೆ ವಾಸನೆ ಬರ್ತಿದೆ.. ದಯವಿಟ್ಟು ವಿಷ ಕೊಡಿ ಎಂದು ಜಡ್ಜ್ ಮುಂದೆ ನಟ ದರ್ಶನ್ ಮನವಿ !

ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸ್ ಕಗ್ಗಂಟಾಗಿ ಪರಿಣಮಿಸಿದೆ. ಇದೀಗ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಕಾಲಕಳೆಯುತ್ತಿದ್ದಾರೆ. ಜೈಲು ವಾಸ ಅನುಭವಿಸ್ತಿರೋ ದಾಸ ಈಗ ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಇದೀಗ ನ್ಯಾಯಾಧೀಶರ ಮುಂದೆ ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ವಿದೇಶದಲ್ಲೂ ಕಾಂತಾರ ಕ್ರೇಜ್! – ಆಸ್ಟ್ರೇಲಿಯಾ, ನ್ಯೂಜಿಲೆಂಡ್ನಲ್ಲೂ ಸಿನಿಮಾ ರಿಲೀಸ್!
ನಟಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೆಜ್ ಕಳುಹಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಡಿಗ್ಯಾಂಗ್ ನರಕ ತೋರಿಸಿದ್ರು. ಶೆಡ್ ಗೆ ಕರೆಸಿ ಭೀಕರವಾಗಿ ಕೊಲೆ ಮಾಡಿದರು. ಈ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಈ ವೇಳೆ ದರ್ಶನ್ ನನಗೆ ವಿಷ ಕೊಡಿ ಎಂದು ಮನವಿ ಮಾಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರದಿಂದ ವಿಚಾರಣೆಗೆ ಹಾಜರಾದ ದರ್ಶನ್, ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನವಾಗಿದೆ. ಬಟ್ಟೆಗಳು ವಾಸನೆ ಬರುತ್ತಿವೆ. ಫಂಗಸ್ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ ಎಂದು ಮನವಿ ಮಾಡಿದರು. ಈ ಮನವಿಗೆ ಜಡ್ಜ್ ಹಾಗೆಲ್ಲ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನು ಪ್ರಾಸಿಕ್ಯೂಷನ್ ಮತ್ತು ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ನೋಡಿರಿ

