ನಟ ದರ್ಶನ್‌ಗೆ ಬಿಗ್ ರಿಲೀಫ್! – ದಾಸನ ಮನವಿಗೆ ಸ್ಪಂದಿಸಿದ ಕೋರ್ಟ್!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ಗೆ ಸೆರೆವಾಸ ಮುಂದುವರಿದಿದೆ. ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆಯ ನಂತರ ಮೊದಲಿನಂತೆ ವಿಐಪಿ ಸೌಲಭ್ಯ ಸಿಗುತ್ತಿಲ್ಲ. ಜೈಲಿನಲ್ಲಿ ಓರ್ವ ಸಾಮಾನ್ಯ ಖೈದಿಯಂತೆ ಪರಿಗಣಿಸಲಾಗುತ್ತಿದೆ. ಜೈಲಿನ ಖೈದಿಗಳ ಕೊಠಡಿಯಿಂದಲೂ ಹೊರಗೆ ಬರಲಾಗುತ್ತಿರಲಿಲ್ಲ. ಇದ್ರಿಂದಾಗಿ ನಟ ದರ್ಶನ್ ನರಕಯಾತನೆ ಅನುಭವಿಸುತ್ತಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ ಇಲ್ಲಿ ಇರಲು ಆಗ್ತಿಲ್ಲ.. ನನಗೆ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ದರ್ಶನ್ ಕಣ್ಣೀರಿಟ್ಟಿದ್ರು. ಇದೀಗ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ನಟನ ಮನವಿಗೆ ಕೋರ್ಟ್ ಸ್ಪಂದಿಸಿದೆ.
ಇದನ್ನೂ ಓದಿ: ಭಾರತಕ್ಕೆ UAE ಲೆಕ್ಕಕ್ಕೇ ಇಲ್ಲ – ಗಿಲ್ ಸ್ಥಾನವೇ BCCIಗೆ ತಲೆನೋವು
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೋರ್ಟ್ ದರ್ಶನ್ ಬಗ್ಗೆ ತುಸು ಕನಿಕರ ತೋರಿದ್ದು, ಹಾಸಿಗೆ ದಿಂಬು ಹಾಗೂ ಜೈಲಿನಲ್ಲಿ ಓಡಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್‌ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ
ಇನ್ನು ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.

ನೋಡಿರಿ

