ಸೊಸೆಗೆ ವರದಕ್ಷಿಣೆ ಕಿರುಕುಳ ಕೊಟ್ರಾ ಎಸ್.ನಾರಾಯಣ್?– ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ FIR

ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ಇದೇ ಆರೋಪದಡಿ ನಿರ್ದೇಶಕರ ವಿರುದ್ಧ ಎಫ್ಐಆರ್ ಕೂಡಾ ದಾಖಲಾಗಿದೆ. ಎಸ್. ನಾರಾಯಣ್, ಪತ್ನಿ ಭಾಗ್ಯಲಕ್ಷ್ಮೀ, ಮಗ ಪವನ್ ವಿರುದ್ಧ ಸೊಸೆ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಬೇಗ ಮಗು ಮಾಡಿಕೊಳ್ಳಿ ಎಂದು ಅನುಶ್ರೀಗೆ ಸಲಹೆ! – ನಂಗೆ ಹೆಣ್ಣು ಪಾಪು ಇಷ್ಟ ಎಂದ ಆಂಕರ್!
ನಿರ್ದೇಶಕ ಎಸ್. ನಾರಾಯಣ್ ಅವರ ಪುತ್ರ ಪವನ್ ಹಾಗೂ ಸೊಸೆ ಪವಿತ್ರಾ ನಡುವಿನ ದಾಂಪತ್ಯ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪವಿತ್ರಾ ಅವರು ಪವನ್ ಮತ್ತು ಅವರ ತಾಯಿ ಭಾಗ್ಯವತಿ ಹಾಗೂ ತಂದೆ ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ. ನಾರಾಯಣ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
2021ರಲ್ಲಿ ಎಸ್.ನಾರಾಯಣ್ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ನಡೆದಿತ್ತು. ಅದ್ದೂರಿಯಾಗಿ ಮದುವೆ ಮಾಡಿದ್ದರು. ಆದರೆ, ನಾಲ್ಕು ವರ್ಷ ಕಳೆಯುವುದರೊಳಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾರಾಯಣ್ ಅವರ ಪತ್ನಿ ಭಾಗ್ಯವತಿ ಹಾಗೂ ಮಗ ಪವನ್ ವಿರುದ್ಧ ಪವಿತ್ರಾ ದೂರು ನೀಡಿದ್ದಾರೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಪವಿತ್ರಾ ದೂರು ನೀಡಿದ್ದಾರೆ. ಮನೆಯನ್ನು ತಾವೇ ನಡೆಸುತ್ತಿದ್ದೆ ಎಂದು ಪವಿತ್ರಾ ಹೇಳಿದ್ದಾರೆ. ‘ಪವನ್ಗೆ ಕೆಲಸ ಇಲ್ಲ. ಹೀಗಾಗಿ, ನಾನೇ ಕೆಲಸ ಮಾಡಿ ಮನೆ ನಡೆಸುತ್ತಿದ್ದೆ. ಈ ವೇಳೆ ‘ಕಲಾಸಾಮ್ರಾಟ್ ಟೀಂ ಅಕಾಡೆಮಿ’ ಆರಂಭಿಸಲು ಹಣಕ್ಕೆ ಬೇಡಿಕೆ ಇಡಲಾಯಿತು. ಆಗ ನಾನು ತಾಯಿಯ ಒಡವೆಯನ್ನು ಅಡವಿಟ್ಟು ಹಣ ಕೊಟ್ಟಿದ್ದೆ. ಆದರೆ ಕಲಾಸಾಮ್ರಾಟ್ ಟೀಂ ಅಕಾಡೆಮಿ ಲಾಸ್ ಆಗಿ ಕ್ಲೋಸ್ ಆಯಿತು’ ಎಂದು ಪವಿತ್ರಾ ಹೇಳಿದ್ದಾರೆ. ಇಷ್ಟೆಲ್ಲ ಆದ ಬಳಿಕ ಪವಿತ್ರಾ ಅವರು ತಮ್ಮ ಹೆಸರಲ್ಲೇ 10 ಲಕ್ಷ ರೂಪಾಯಿ ಸಾಲ ಮಾಡಿ ಪವನ್ಗೆ ನೀಡಿದ್ದರಂತೆ. ಈಗ ನನ್ನನ್ನೇ ಮನೆಯಿಂದ ಹೊರಹಾಕಿದ್ದಾರೆ ಎಂದು ಪವಿತ್ರಾ ದೂರು ನೀಡಿದ್ದಾರೆ.
ಇನ್ನು ವರದಕ್ಷಿಣೆ ಆರೋಪಕ್ಕೆ ಎಸ್. ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ. ‘ಪವಿತ್ರಾ ಮನೆ ಬಿಟ್ಟು ಹೋಗಿ 14 ತಿಂಗಳಾಗಿದೆ. ಮನೆ ಬಿಟ್ಟು ಹೋಗಿದ್ದು ಯಾಕೆ ಎಂದು ಹೇಳಿದರೆ ನಾನು ಅವರ ಹೆಸರಿಗೆ ಮಸಿ ಬಳಿದಂತೆ ಆಗುತ್ತದೆ. ಮದುವೆ ಆಗಿ ಒಂದು ತಿಂಗಳ ಬಳಿಕ ಮಾತುಕತೆಯೇ ನಿಂತು ಹೋಯಿತು. ವಯಸ್ಸು, ವ್ಯಕ್ತಿತ್ವಕ್ಕೂ ಎರಡಕ್ಕೂ ಪವಿತ್ರಾ ಬೆಲೆ ಕೊಡುತ್ತಿರಲಿಲ್ಲ’ ಎಂದು ಸೊಸೆಯನ್ನ ದೂರಿದ್ದಾರೆ ಎಸ್ ನಾರಾಯಣ್.

ನೋಡಿರಿ

