ಮದ್ದೂರಿನಲ್ಲಿ ಪ್ರಚೋದನಕಾರಿ ಹೇಳಿಕೆ – ಸಿಟಿ ರವಿ ವಿರುದ್ಧ FIR

ಮದ್ದೂರಿನಲ್ಲಿ ಪ್ರಚೋದನಕಾರಿ ಹೇಳಿಕೆ – ಸಿಟಿ ರವಿ ವಿರುದ್ಧ FIR

ಮದ್ದೂರಿನಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮದ್ದೂರು ಗಲಾಟೆ ವಿಚಾರವಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದ ಕೇಸರಿ ಪಡೆಗೆ ಇದೀಗ ಸಿ.ಟಿ ರವಿ ವಿರುದ್ಧದ ಎಫ್ ಐ ಆರ್ ರಾಜಕೀಯ ಅಸ್ತ್ರವಾಗಿ ಸಿಕ್ಕಿದೆ. ಕೇಸರಿ ಪಡೆ ಇದನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆಯ ವೇದಿಕೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ‌‌ ಸಿ.ಟಿ.ರವಿ. ಪ್ರಚೋದಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು.

ಮದ್ದೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಸಿ.ಟಿ.ರವಿ ರವರು ಮೆರವಣಿಗೆಯಲ್ಲಿ ಭಾಗವಹಿಸಿದ ಜನರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಮುಸ್ಲಿಂ ಜನಾಂಗದ ಮೇಲೆ ದ್ವೇಷ ಉಂಟುಮಾಡುವಂತಹ ಹೇಳಿಕೆ ನೀಡಿದ್ದಾರೆ ಎಂಬುದು ಆರೋಪವಾಗಿದೆ.  ಭಾಷಣದಲ್ಲಿ 5% ಇದ್ದಾಗಲೇ ಬಾಲ ಬಿಚ್ಚುತ್ತಿದ್ದಾರೆ ಇನ್ನೂ 50% ಆದಲ್ಲಿ ನಮ್ಮ ಮಕ್ಕಳು, ಮೊಮ್ಮಕ್ಕಳು ಬದುಕುವುದಕ್ಕೆ ಆಗುತ್ತಾ, ಸಮಾಜ ಒಡೆಯುತ್ತೊಡೆಯುತ್ತಾರೆ. ಕುತಂತ್ರಿಗಳು ಓಟಿನ ಆಸೆಗಾಗಿ ಹಿಂದೂ ಸಮಾಜವನ್ನು ಒಡೆಯುತ್ತಾರೆ. ಮುಸಲ್ಮಾನರು ಪಾಕಿಸ್ತಾನ ಜಿಂದಾಬಾದ್ ಅಂದರು, ಬಾಂಬ್ ಹಾಕಿದರೂ ಎಸ್ ಎಸ್. ಅಂತಾರೆ” ಎಂದಿದ್ದರು.

ಅಷ್ಟೇ ಅಲ್ಲದೆ,”ಮುಸಲ್ಮಾನರು ರಾಮ ಮಂದಿರದಲ್ಲಿ ಪೆಟ್ರೋಲ್ ಬಾಂಬ್ ಹಾಕಿದ್ದಾಗಲೇ ಇವರಿಗೆ ಬುದ್ದಿ ಕಲಿಸಬೇಕಾಗಿತ್ತು. ಈಗ ಈ ರೀತಿ ಆಗುತ್ತಿರಲಿಲ್ಲ ನೀವು ಹೊರಗಡೆಯಿಂದ ಬಂದವರು, ನಾವು ಇಲ್ಲೇ ಇರುವರು, ತೊಡೆ ತಟ್ಟೋ ಕೆಲಸ ಮಾಡಬೇಡಿ. ತೊಡೆ ಮುರಿತ್ತಿವಿ. ತಲೆನೂ ತೆಗೆತ್ತೀವಿ, ನಮಗೆ ತೊಡೆ ಮುರಿಯೋದು ಗೊತ್ತು. ಕಲ್ಲು ಹೊಡೆವರನ್ನು, ಕಲ್ಲಿನ ಒಳಗಡೆ ಸಮಾಧಿ ಮಾಡೋ ತಾಕತ್ತು ಹಿಂದೂ ಸಮಾಜಕ್ಕೆ ಇದೇ ” ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿತ್ತು. ಅದರಂತೆ ಪ್ರಕರಣ ದಾಖಲಾಗಿದೆ.

ಎಫ್ಐಆರ್‌ಗೆ ಕೇಸರಿ ಪಡೆ ಪ್ರತಿಕ್ರಿಯೆ ಏನು? ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. “ಮದ್ದೂರಿನಲ್ಲಿ ನಿನ್ನೆ ನಾವು ದೊಡ್ಡ ಹೋರಾಟ ಮಾಡಿದ್ದೇವೆ. ನಾವು ಮದ್ದೂರಿಗೆ ಹೋಗಿದ್ದು ಬೆಂಬಲ ಕೊಡಲು ಹಾಗೂ ಗಾಯಗೊಂಡವರ ಮನೆಗೆ ಹೋದಾಗ ಅವರು ಹೇಳಿದ್ದು ಏನೆಂದರೆ ಶವಯಾತ್ರೆ ವೇಳೆ ಮಸೀದಿ ಮುಂದೆ ತಮಟೆ ಹೊಡೆಯಬಾರದಂತೆ.‌ಆ ಮಸೀದಿ ಕಟ್ಟಿರುವುದು ಸರ್ಕಾರಿ ಜಾಗದಲ್ಲಿ.‌ಸಿ.ಟಿ. ರವಿ ಉದ್ರೇಕಕಾರಿ ಭಾಷಣ ಏ‌ನೂ ಮಾಡಿಲ್ಲ. ಇದಕ್ಕಿಂತ ಕೆಟ್ಟದಾಗಿ ಕಾಂಗ್ರೆಸ್ ನವರು ಬಹಳ ಸಲ ಮಾತಾಡಿದ್ದಾರೆ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಏನು ಮಾಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

Kishor KV