ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆ – ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆ – ಮಾಸ್ಕ್ ಕಡ್ಡಾಯ

ಬೆಳಗಾವಿ : ಒಂದೆಡೆ ಕೊರೊನಾ ಆತಂಕ ಆವರಿಸಿರುವಾಗಲೇ ಮತ್ತೊಂದೆಡೆ ಸರ್ಕಾರ ಹೊಸ ವರ್ಷಾಚರಣೆಗೆ ಕೆಲವೊಂದು ನಿಯಮವನ್ನು ಜಾರಿಗೊಳಿಸಿದೆ. ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ಕಲ್ಪಿಸಲಾಗಿದೆ. ಬಾರ್, ಪಬ್ ಹಾಗೂ ಹೊಟೇಲ್​ಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು. ಎಷ್ಟು ಟೇಬಲ್ ಇದೆಯೋ ಅಷ್ಟು ಚೇರ್​ಗೆ ಮಾತ್ರ ಅನುಮತಿ ನೀಡಲಾಗಿದೆ. ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬೆಂಗಳೂರು ಸೇರಿದಂತೆ ಎಲ್ಲಾ ನಗರಗಳಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಕಂದಾಯ ಸಚಿವ ಆರ್​. ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ:  ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ವ್ಯಕ್ತಿಗೆ ಕೊರೊನಾ ಸೋಂಕು – ಬಿಬಿಎಂಪಿ ಹೈ ಅಲರ್ಟ್

ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಸಚಿವರಾದ ಆರ್ ಅಶೋಕ್ ಮತ್ತು ಸುಧಾಕರ್ ನೇತೃತ್ವದಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು, ವರ್ಚುವಲ್ ಮೂಲಕ ತಜ್ಞರ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್​. ಅಶೋಕ್,  ಎಂಜಿ ರೋಡ್ ಸೇರಿದಂತೆ ಎಲ್ಲಾ ಕಡೆ ಈ ನಿಯಮ ಕಡ್ಡಾಯವಾಗಿದೆ. ಹೊಸ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಗರ್ಭಿಣಿಯರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ಹೆಚ್ಚಾಗಿ ಜನ ಒಂದೇ ಕಡೆ ಸೇರುವ ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲೂ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಚಿತ್ರಮಂದಿರ​ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್​ ಧರಿಸುವುದು ಕಡ್ಡಾಯ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದೆ. ಎಲ್ಲಾ ಆಸ್ಪತ್ರೆಗಳ ಪರಿಶೀಲನೆಗಾಗಿ ಕಮಿಟಿ ರಚನೆ ಮಾಡಲಾಗಿದೆ. ಆಕ್ಸಿಜನ್, ಐಸಿಯು ಬೆಡ್ ಪರಿಶೀಲನೆ ಮಾಡಬೇಕು. ಮಾಸ್ಕ್ ಹಾಕದೆ ಇದ್ದರೇ ಸದ್ಯಕ್ಕೆ ದಂಡ ಇಲ್ಲ ಎಂದು ಸಭೆ ನಡೆದ ಬಳಿಕ ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ಅಲ್ಲದೇ ಬೂಸ್ಟರ್ ಡೋಸ್ ಹೆಚ್ಚಿನ ಜನರಿಗೆ ಕೊಡಲು ಕ್ರಮ ಕೈಗೊಳ್ಳುತ್ತೇವೆ. ಬೂಸ್ಟರ್ ಡೋಸ್ ಕಡ್ಡಾಯವಲ್ಲ, ಅತ್ಯವಶ್ಯಕ ಎಂದು ಆರೋಗ್ಯ ಸಚಿವ ಸುಧಾಕರ್​ ಹೇಳಿದ್ದಾರೆ.

suddiyaana