ಸ್ಥಗಿತಗೊಂಡಿದ್ದ ವೈಷ್ಣೋದೇವಿ ಸೆಪ್ಟೆಂಬರ್ 14ರಿಂದ ಆರಂಭ – ಭಕ್ತರಿಗೆ ಸಕಲ ವ್ಯವಸ್ಥೆ ಮಾಡಿದ ದೇವಸ್ಥಾನ ಮಂಡಳಿ –

ಸ್ಥಗಿತಗೊಂಡಿದ್ದ ವೈಷ್ಣೋದೇವಿ ಸೆಪ್ಟೆಂಬರ್ 14ರಿಂದ ಆರಂಭ –  ಭಕ್ತರಿಗೆ ಸಕಲ ವ್ಯವಸ್ಥೆ ಮಾಡಿದ ದೇವಸ್ಥಾನ ಮಂಡಳಿ –

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14ರಿಂದ ಪುನರಾರಂಭಗೊಳ್ಳಲಿದೆ. ಭೂಕುಸಿತ ಮತ್ತು ಮೇಘಸ್ಫೋಟದಿಂದ ಪರಿಸ್ಥಿತಿಗಳ ನಂತರ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಾಲಯಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು.

ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು. ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಪರಿಸ್ಥಿತಿಯ ತೀವ್ರತೆಯನ್ನು ಪರಿಗಣಿಸಿ ಸರ್ಕಾರ ತಕ್ಷಣವೇ ವೈಷ್ಣೋ ದೇವಿ ತೀರ್ಥಯಾತ್ರೆಯನ್ನು ಸ್ಥಗಿತಗೊಳಿಸಿತು. ಅಂದಿನಿಂದ ಈ ಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು..  ತೀರ್ಥಯಾತ್ರೆ ಪುನರಾರಂಭಗೊಳ್ಳಲು ಕಾತುರದಿಂದ ಕಾಯುತ್ತಿದ್ದರು, ಈಗ ಮತ್ತೆ ಓಪನ್ ಆಗುತ್ತಿರುವುದು ಭಕ್ತರಿಗೆ ಖುಷಿ ತರಿಸಿದೆ.

ಭಕ್ತರಿಗೆ ತೊಂದರೆ ಆಗದಂತೆ ವೈಷ್ಣೋ ದೇವಿ ದೇಗುಲ ಮಂಡಳಿ ಬೇಕಾದ ವ್ಯವಸ್ಥೆಗಳನ್ನು ಮಾಡುತ್ತಿದೆ. ಯಾತ್ರಿಕರ ಅನುಕೂಲಕ್ಕಾಗಿ ದೇವಾಲಯ ಮಂಡಳಿಯು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಯಾತ್ರೆಗೆ ಸಂಬಂಧಿಸಿದ ಬುಕಿಂಗ್‌ಗಳಿಗಾಗಿ ನೀವು ಅಧಿಕೃತ ವೆಬ್‌ಸೈಟ್ http://maavaishnodevi.orgಗೆ ಭೇಟಿ ನೀಡಬಹುದು.

ಸಾಕಷ್ಟು ದಿನಗಳಿಂದ ಜಮ್ಮು ಪ್ರದೇಶದ ಹವಾಮಾನ ಬಹಳ ಸುಧಾರಿಸಿದೆ. ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗದ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ವೈಷ್ಣೋ ದೇವಿ ದೇವಾಲಯವು ಭಾರತದ ಅತ್ಯಂತ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ತ್ರಿಕೂಟ ಬೆಟ್ಟಗಳಲ್ಲಿ ನೆಲೆಗೊಂಡಿರುವ ಈ ದೇವಾಲಯವು ದುರ್ಗಾ ದೇವಿಯ ಅವತಾರವೆಂದು ಪರಿಗಣಿಸಲ್ಪಟ್ಟ ಮಾತಾ ವೈಷ್ಣೋ ದೇವಿಗೆ ಸಮರ್ಪಿತವಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ಆಶೀರ್ವಾದ ಪಡೆಯಲು ಈ ಪವಿತ್ರ ಗುಹಾ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

 

Kishor KV