ಮಿಜೋರಾಂನ ಮೊದಲ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ!

ಮಿಜೋರಾಂನ ಮೊದಲ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ಅವರ ಇಂದು ಮಿಜೋರಾಂನ ಮೊದಲ ರೈಲು ಮಾರ್ಗವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ.  ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್ಪ್ರೆಸ್, ಸೈರಾಂಗ್-ಗುವಾಹಟಿ ಎಕ್ಸ್ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್ಪ್ರೆಸ್‌ಗೆ ಹಸಿರು ನಿಶಾನೆ ತೋರಿಸಿದ್ದಾರೆ.

ಇದನ್ನೂ ಓದಿ: ನೇಪಾಳದ ಪ್ರಗತಿಗೆ ಭಾರತ ಸಿದ್ಧ – ಪ್ರಧಾನಿ ಸುಶೀಲಾ ಕರ್ಕಿಗೆ ಮೋದಿ ಅಭಿನಂದನೆ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಅತ್ಯಂತ ಸವಾಲಿನ ಮಾರ್ಗಗಳಲ್ಲಿ ಒಂದೆಂದು ಪರಿಗಣಿಸಲಾದ 8,070 ಕೋಟಿ ರೂಪಾಯಿ ವೆಚ್ಚದ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು 2008-09ರಲ್ಲಿ ಮಂಜೂರು ಮಾಡಿ 2015 ರಲ್ಲಿ ನಿರ್ಮಾಣ ಪ್ರಾರಂಭವಾಯಿತು. ಈ ಮಾರ್ಗದಲ್ಲಿ 45 ಸುರಂಗಗಳು, 55 ಪ್ರಮುಖ ಸೇತುವೆಗಳು ಮತ್ತು 87 ಸಣ್ಣ ಸೇತುವೆಗಳು ಸೇರಿವೆ. ಸೈರಾಂಗ್ ಬಳಿಯಿರುವ ಸೇತುವೆ ಸಂಖ್ಯೆ 144, ಕುತುಬ್ ಮಿನಾರ್‌ಗಿಂತ 114 ಮೀಟರ್ ಎತ್ತರವಾಗಿದೆ. ಇದು ದೇಶದ ಅತಿ ಎತ್ತರದ ಪಿಯರ್ ರೈಲ್ವೆ ಸೇತುವೆಯಾಗಿದೆ. ಈ ಮಾರ್ಗವು ಬೈರಾಬಿ ಹೊರತುಪಡಿಸಿ ಐದು ರಸ್ತೆ ಮೇಲ್ಸೇತುವೆಗಳು ಮತ್ತು ಆರು ಅಂಡರ್‌ಪಾಸ್‌ಗಳನ್ನು ಒಳಗೊಂಡಿದೆ, ಇದು ನಾಲ್ಕು ಪ್ರಮುಖ ನಿಲ್ದಾಣಗಳನ್ನು ಒಳಗೊಂಡಿದೆ – ಹೊರ್ಟೋಕಿ, ಕಾನ್‌ಪುಯಿ, ಮುವಾಲ್ಖಾಂಗ್ ಮತ್ತು ಸೈರಾಂಗ್ ಆಗಿವೆ. ಇದೀಗ ಐಜ್ವಾಲ್ ನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು.

ಇನ್ನು ಎಲ್ಲಾ ಸುರಂಗಗಳಲ್ಲಿ ಬ್ಯಾಲೆಸ್ಟ್ಲೆಸ್ ಟ್ರ‍್ಯಾಕ್ ಅಳವಡಿಸಲಾಗಿದೆ. ಸೇತುವೆ ಮತ್ತು ಸುರಂಗಗಳನ್ನು ಹೊರತುಪಡಿಸಿ 23.715 ಕಿ.ಮೀ ಮಾರ್ಗವು ಬಯಲು ಪ್ರದೇಶದಲ್ಲಿದೆ. ಕೆಲವೆಡೆ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ರೆ, ಅದರಿಂದ ರಕ್ಷಣೆ ಪಡೆಯಲು ಸೂಕ್ತ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಸಾಯಿರಾಂಗ್ ಬಳಿಯ ಸೇತುವೆ ಸಂಖ್ಯೆ 144 ಕುತುಬ್ ಮಿನಾರ್‌ಗಿಂತ 114 ಮೀಟರ್ ಎತ್ತರದಲ್ಲಿದೆ. ಇದು ದೇಶದ ಅತಿ ಎತ್ತರದ ಪಿಯರ್ ರೈಲ್ವೆ ಸೇತುವೆಯಾಗಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆಯ ಅಧಿಕಾರಿ ತಿಳಿಸಿದ್ದಾರೆ.

Shwetha M