ಕಾಂತಾರ ಚಾಪ್ಟರ್‌ 1 ಟ್ರೈಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್!‌ – ಸಿನಿಮಾ ಪ್ರೀ ರಿಲೀಸ್ ಯಾವಾಗ?

ಕಾಂತಾರ ಚಾಪ್ಟರ್‌ 1 ಟ್ರೈಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್!‌ – ಸಿನಿಮಾ ಪ್ರೀ ರಿಲೀಸ್ ಯಾವಾಗ?

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಅಕ್ಟೋಬರ್ 2 ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಅಂತಿಮ ಹಂತದಲ್ಲಿವೆ. ಸಿನಿಮಾ ರಿಲೀಸ್‌ ಗೆ ಕೆಲವು ದಿನಗಳ ಬಾಕಿ ಇದ್ರೂ ಚಿತ್ರ ತಂಡ ಇನ್ನೂ ಪ್ರಚಾರಕ್ಕೆ ಇಳಿದಿಲ್ಲ. ನಿನ್ನೆ ರಿಷಬ್‌ ಶೆಟ್ಟಿ ಸಿನಿಮಾದ ಪೋಸ್ಟರ್‌ ಹಂಚಿಕೊಂಡಿದ್ರು. ಈ ಬೆನ್ನಲ್ಲೇ ಸಿನಿಮಾ ಟ್ರೈಲರ್‌ ರಿಲೀಸ್‌ ಯಾವಾಗ ಅಂತಾ ಫ್ಯಾನ್ಸ್‌ ಕೇಳಿದ್ರು. ಹೊಂಬಾಳೆ ಫಿಲ್ಮ್ಸ್ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌ ಕೊಟ್ಟಿದೆ.

ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಕೇಸ್‌, ವಿಚಾರಣೆಗೆ ಹಾಜರಾಗದ ತಿಮರೋಡಿ- ಮನೆ ಗೋಡೆಗೆ ಪೊಲೀಸ್ ನೋಟಿಸ್

ಕಾಂತಾರ ಚಾಪ್ಟರ್‌ 1 ಸಿನಿಮಾದ ಪ್ರಚಾರ ಕಾರ್ಯ ನಿಧಾನಕ್ಕೆ ಸಾಗಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಆಗಿಲ್ಲ, ಸಿನಿಮಾದ ಬಗ್ಗೆ ಯಾವುದೇ ಸುದ್ದಿಗೋಷ್ಠಿ, ಪ್ರೀ ರಿಲೀಸ್ ಕಾರ್ಯಕ್ರಮದ ಘೋಷಣೆ ಆಗಿಲ್ಲ. ಹಾಡುಗಳು ಬಿಡುಗಡೆ ಆಗಿಲ್ಲ ಎಂಬ ದೂರುಗಳು ವ್ಯಕ್ತವಾಗಿದ್ದವು. ಇದೀಗ ಕೆಲವೇ ದಿನಗಳಲ್ಲಿ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಲಿದೆ ಎಂಬ ಸುದ್ದಿ ಇದೆ. ಇದರ ನಡುವೆ ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಪ್ರಕಟಿಸಿದೆ.

ಕಾಂತಾರ: ಚಾಪ್ಟರ್ 1 ಸಿನಿಮಾದ ಟ್ರೈಲರ್ ಇದೇ ತಿಂಗಳು 22 ನೇ ತಾರೀಖಿನಂದು, ಮಧ್ಯಾಹ್ನ 12:45ಕ್ಕೆ ಬಿಡುಗಡೆ ಆಗಲಿದೆ. ಹೊಂಬಾಳೆಯ ಅಧಿಕೃತ ಯೂಟ್ಯೂಬ್ ಚಾನೆಲ್​​​ನಲ್ಲಿ ಟ್ರೈಲರ್ ಬಿಡುಗಡೆ ಆಗಲಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಟ್ರೈಲರ್ ಅನ್ನು ವೀಕ್ಷಿಸಬಹುದಾಗಿದೆ.

Shwetha M