ಟಿ-20 ಕ್ರಿಕೆಟ್ನಿಂದ ವಿರಾಟ್ ಕೊಹ್ಲಿ ತಾತ್ಕಾಲಿಕ ಬ್ರೇಕ್ – ಹೊಸ ತಂಡ ಸಿದ್ಧಪಡಿಸಲು ಬಿಸಿಸಿಐ ಪ್ಲ್ಯಾನ್

ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಾತ್ಕಾಲಿಕವಾಗಿ ಟಿ-20 ಕ್ರಿಕೆಟ್ನಿಂದ ಬ್ರೇಕ್ ಪಡೆದಿದ್ದಾರೆ. ಮುಂದಿನ ಐಪಿಎಲ್ ಟೂರ್ನಿವರೆಗೆ ಯಾವುದೇ ಟಿ-20 ಟೂರ್ನಿಯಲ್ಲಿ ಭಾಗಿಯಾಗದೆ ಇರಲು ಕೊಹ್ಲಿ ತೀರ್ಮಾನಿಸಿದ್ದಾರೆ. ODI ಮತ್ತು ಟೆಸ್ಟ್ ಕ್ರಿಕೆಟ್ ಬಗ್ಗೆ ಹೆಚ್ಚು ಫೋಕಸ್ ಮಾಡೋ ನಿಟ್ಟಿನಲ್ಲಿ ಕೊಹ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ.
ಇದನ್ನೂ ಓದಿ: 100ನೇ ಟೆಸ್ಟ್ ಪಂದ್ಯದಲ್ಲಿ 200 ರನ್ ಬಾರಿಸಿದ ವಾರ್ನರ್ – ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ
ಇನ್ನು 2024 ಟಿ-20 ವಿಶ್ವಕಪ್ ಯುವಕರ ಹೊಸ ತಂಡವನ್ನ ಸಿದ್ಧಪಡಿಸಲು ಬಿಸಿಸಿಐ ಪ್ಲ್ಯಾನ್ ಮಾಡ್ತಿದೆ. ಮುಂಬರುವ ಟಿ-20 ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಸೇರಿದಂತೆ ಹಿರಿಯ ಆಟಗಾರರು ತಂಡಕ್ಕೆ ಸೇರ್ಪಡೆಯಾಗೋ ಸಾಧ್ಯತೆ ತೀರಾ ಕಡಿಮೆ ಎನ್ನಲಾಗ್ತಿದೆ. ಶ್ರೀಲಂಕಾ ವಿರುದ್ದದ ಟಿ20 ಸರಣಿಯಿಂದಲೇ ವಿರಾಟ್ ಕೊಹ್ಲಿ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದಾರೆ. ಇದರಿಂದ ಲಂಕಾ ವಿರುದ್ಧದ ಟಿ20 ಸರಣಿಯಿಂದ ವಿರಾಟ್ ಕೊಹ್ಲಿ, ಇಂಜುರಿಗೆ ತುತ್ತಾಗಿರುವ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಪಂದ್ಯಗಳನ್ನಾಡಲಿದೆ. ಕೊಹ್ಲಿ ಎಷ್ಟು ದಿನ ವಿಶ್ರಾಂತಿ ಪಡೆಯಲಿದ್ದಾರೆ ಅನ್ನೋದು ತಿಳಿದುಬಂದಿಲ್ಲ. ಆದರೆ, ಏಕದಿನ ಹಾಗೂ ಟೆಸ್ಟ್ ಮಾದರಿಯಲ್ಲಿ ಹೆಚ್ಚಿನ ಗಮನ ಕೇಂದ್ರೀಕರಿಸಲು ಕೊಹ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಐಪಿಎಲ್ 2023ರ ಟೂರ್ನಿ ವರೆಗೆ ಕೊಹ್ಲಿ ಟೀಂ ಇಂಡಿಯಾ ಟಿ20 ಟೂರ್ನಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಸದ್ಯ ವಿಶ್ರಾಂತಿ ಪಡೆದುಕೊಂಡಿರುವ ಕೊಹ್ಲಿ 2023ರ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಟೀಂ ಇಂಡಿಯಾ ಟಿ20 ಮಾದರಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತ ಇದೆ.