ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಗುಡ್‌ನ್ಯೂಸ್ – ಹುಬ್ಬಳ್ಳಿ-ಕೊಲ್ಲಂಗೆ ಸ್ಪೆಷಲ್ ಟ್ರೈನ್

ರಾಜ್ಯದ  ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಗುಡ್‌ನ್ಯೂಸ್ – ಹುಬ್ಬಳ್ಳಿ-ಕೊಲ್ಲಂಗೆ  ಸ್ಪೆಷಲ್ ಟ್ರೈನ್

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ  ದಸರಾ ಹಬ್ಬದಲ್ಲಿ ಗುಡ್ ನ್ಯೂಸ್ ನೀಡಿದೆ.   ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಅವರ ಪ್ರಯತ್ನದ ಫಲವಾಗಿ ʼಹುಬ್ಬಳ್ಳಿ To ಕೊಲ್ಲಂʼ ವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟೆಂಬರ್‌ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ.

 ಹುಬ್ಬಳ್ಳಿ-  ಹಾವೇರಿ – ದಾವಣಗೆರೆ –  ಬೀರೂರು –  ಅರಸೀಕೆರೆ –  ತುಮಕೂರು –  ಬೆಂಗಳೂರು –  ಕೃಷ್ಣರಾಜಪುರಂ –  ಬಂಗಾರಪೇಟ್ –  ಸೇಲಂ –  ಇರೋಡ್‌ –  ತಿರುಪುರ –  ಪೊದನೂರ –  ತ್ರಿಸ್ಸೂರ –  ಅಲುವಾ –  ಎರ್ನಾಕುಲಂ ಟೌಣ್‌ –  ಕೊಟ್ಟಯಾಂ –  ಚಂಗನಸ್ಸೇರಿ –  ತಿರುವಳ್ಳಾ –  ಚೆಂಗನ್ನೂರ್‌ –  ಕರುನಾಗಪಲ್ಲಿ – ಸಸ್ಥನಕೊಟ್ಟಾ ಮಾರ್ಗದಲ್ಲಿ ಈ ವಿಶೇಷ ರೈಲು ಸಂಚರಿಸಲಿದೆ.

ಉ ನಗರಿ ಹುಬ್ಬಳ್ಳಿ ಮತ್ತು ಕೊಲ್ಲಂ ಮಧ್ಯೆ ಪ್ರತಿ ಭಾನುವಾರ ಮತ್ತು ಸೋಮವಾರ ಈ ವಿಶೇಷ ಎಕ್ಸ್‌ಪ್ರೆಸ್‌ ರೈಲು ಒಟ್ಟು 14 ವಾರ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲು ಸಂಖ್ಯೆ 07313 ಸೆ.28ರಿಂದ ಪ್ರತಿ ಭಾನುವಾರ ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿಯಿಂದ ಸಂಚರಿಸಲಿದ್ದರೆ, ರೈಲು ಸಂಖ್ಯೆ 07314 ಸೆ.29 ರಿಂದ ಪ್ರತಿ ಸೋಮವಾರ ಸಂಜೆ 5 ಗಂಟೆಗೆ ಕೊಲ್ಲಂನಿಂದ ಸಂಚಾರ ಆರಂಭಿಸಲಿದೆ.

ಇದನ್ನೂ ಓದಿ: ಸಾಕಿದ ಮಾಲೀಕನ ಪ್ರಾಣಕ್ಕೆ ಕುತ್ತು ತಂದ ಹುಲಿರಾಯ! – ಯಜಮಾನನ  ಕತ್ತು ಸೀಳಿತಾ ವ್ಯಾಘ್ರ

ದಸರಾ ಹಬ್ಬದ ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸೇರಿದಂತೆ, ರಾಜ್ಯದಿಂದ ಸಂಚರಿಸುವ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ವ್ಯವಸ್ಥೆಗಾಗಿ ಭಾರತೀಯ ಅಯ್ಯಪ್ಪ ಸೇವಾ ಸಂಘ, ಸಚಿವ ಪ್ರಲ್ಹಾದ್‌ ಜೋಶಿ ಅವರಿಗೆ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನ ಸೆಳೆದು ವಿಶೇಷ ರೈಲು ಸಂಚಾರ ಸೇವೆ ಕಲ್ಪಿಸಿದ್ದಾರೆ.

ಇದೇ ವೇಳೆ ಸಚಿವ ಪ್ರಲ್ಹಾದ್‌ ಜೋಶಿ ಅವರು ತಮ್ಮ ಮನವಿಗೆ ಸ್ಪಂದಿಸಿ ರಾಜ್ಯದ ಶ್ರೀ ಅಯ್ಯಪ್ಪ ಭಕ್ತರಿಗೆ ವಿಶೇಷ ರೈಲು ಒದಗಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇತ್ತ ಭಾರತೀಯ ಅಯ್ಯಪ್ಪ ಸೇವಾ ಸಂಘದವರೂ ಸಹ ಸಚಿವ ಪ್ರಲ್ಹಾದ್‌ ಜೋಶಿ ಸೇರಿದಂತೆ ನೈರುತ್ಯ ರೈಲ್ವೆ ವಲಯದ ಅಧಿಕಾರಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Kishor KV