ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ವಿಧಿವಶ – ಕಣ್ಣೀರಿನಲ್ಲಿ ಸಾಹಿತ್ಯ ಲೋಕ

ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ವಿಧಿವಶ – ಕಣ್ಣೀರಿನಲ್ಲಿ ಸಾಹಿತ್ಯ ಲೋಕ

ಕನ್ನಡದ ಖ್ಯಾತ  ಸಾಹಿತಿ  ಎಸ್.ಎಲ್. ಭೈರಪ್ಪ ವಿಧಿವಶರಾಗಿದ್ದಾರೆ. ಭೈರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಲ್.ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟೋತ್ಸಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

 

ಭೈರಪ್ಪ ಅವರ ಪೂರ್ಣ ಹೆಸರು ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂದು ಕನ್ನಡ ಸಾಹಿತ್ಯ ಲೋಕದ ದಿಗ್ಗಜ ವ್ಯಕ್ತಿಯಾಗಿದ್ದರು. 1931ರ ಆಗಸ್ಟ್ 20ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದರು.

ಮೈಸೂರಿನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ನಿವೃತ್ತಿ ಜೀವನನ್ನು ನಡೆಸುತ್ತಿದ್ದರು. ಇನ್ನು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಸಾಹಿತ್ಯದ ಸೇವೆಯಲ್ಲಿ ಸದಾ ಮುಂದಿರುತ್ತಿದ್ದ ಭೈರಪ್ಪ ಅವರ ಬರಹಗಳನ್ನು ಓದುವವರ ಸಾಲಿನಲ್ಲಿ ಹೊಸ ಯುಗದ ನವ ಯುವಕರೇ ಹೆಚ್ಚಾಗಿದ್ದರು. ಅವರ ಪ್ರಸಿದ್ಧ ಕೃತಿಗಳನ್ನು ಈಗಲೂ ಹಲವು ಯುವಜನರಿಗೆ ಮೊದಲ ಓದಾಗಿ ಓದುವಂತೆ ಪ್ರೇರಣೆ ನೀಡುವವರ ಸಂಖ್ಯೆಗೇನೂ ಕಡಿಮೆಯಾಗಿಲ್ಲ. ಇದೀಗ ಕನ್ನಡ ಸಾಹಿತ್ಯ ಲೋಕದ ಬರವಣಿಗೆಯಲ್ಲಿ ಶಾಶ್ವರ ಪೂರ್ಣ ವಿರಾಮ ಹಾಕಿದ್ದಾರೆ.

ಎಸ್. ಎಲ್. ಭೈರಪ್ಪ ಅವರು ಕನ್ನಡದ ಪ್ರಮುಖ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿಂತಕರಾಗಿದ್ದರು. ಅವರ ಕಾದಂಬರಿಗಳು ಭಾರತೀಯ ಭಾಷೆಗಳಿಗೆ ಅನುವಾದಗೊಂಡಿದ್ದು, ವ್ಯಾಪಕ ಜನಪ್ರಿಯತೆ ಗಳಿಸಿವೆ.

ಇವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಸ್ಥಾಪಿಸಿದ್ದಾರೆ.

 

Kishor KV