ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ – ನಾಗೇಂದ್ರ ಮತ್ತೇ ಸಚಿವರಾಗ್ತಾರೆ ಎಂದ ಜಮೀರ್!

ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ – ನಾಗೇಂದ್ರ ಮತ್ತೇ ಸಚಿವರಾಗ್ತಾರೆ ಎಂದ ಜಮೀರ್!

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗ್ತಿದೆ. ಒಂದ್ಕಡೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡಿತಾ ಇದ್ರೆ, ಮತ್ತೊಂದ್ಕಡೆ ಒಂದ್ಕಡೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡಿತಾ ಇದ್ರೆ, ಮತ್ತೊಂದ್ಕಡೆ ಸಚಿವ ಸಂಪುಟದ ಬಗ್ಗೆ ನಾಗೇಂದ್ರ ಮತ್ತೇ ಸಚಿವರಾಗ್ತಾರೆ ಎಂದು ವಕ್ಫ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಹೇಳಿದ್ದಾರೆ.

ಇದನ್ನೂ ಓದಿ: ಅಮ್ಮ ಪ್ಲೀಸ್ ಬಿಟ್ಟು ಬಿಡು – ಚಿಕನ್ ಕೇಳಿದ್ದಕ್ಕೆ ಮಗನನ್ನೇ ಕೊಂದ ಪಾಪಿ ತಾಯಿ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಜಮೀರ್‌, ನಮ್ಮ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದೆ. ಯಾವುದೇ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು. ನಾಗೇಂದ್ರ ಮತ್ತೇ ಸಚಿವರಾಗ್ತಾರೆ. 10 ದಿನದಲ್ಲಿ ನಾಗೇಂದ್ರ ಅವರಿಗೆ ಸಚಿವಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಗ್ಗೆಯೂ ಜಮೀರ್‌ ಮಾತನಾಡಿದ್ದಾರೆ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. ಐದು ವರ್ಷ ಸಿದ್ದರಾಮಯ್ಯ ಮುಂದುವರೆಯುತ್ತಾರೆ  ಎಂದು ಹೇಳಿದ್ದಾರೆ.

ಒಂದು ವರ್ಷದ ನಂತರ ಜಿಲ್ಲೆಗೆ ಆಗಮಿಸಿದ್ದಕ್ಕೆ  ಕೇಳಿದ ಪ್ರಶ್ನೆಗೆ,  ಬಳ್ಳಾರಿಯ ಯಾವ ಕೆಲಸಗಳು ಬಾಕಿ ಉಳಿದಿಲ್ಲ. ಎಲ್ಲಾ ಕೆಲಸ ಕೆಲಸ ಕಾರ್ಯಗಳು ನಡೆಯುತ್ತಿವೆ. ನಾಗೇಂದ್ರ ಮೂಲಕ ಸಮಸ್ಯೆಗಳು ನನಗೆ ಮಾಹಿತಿ ಬರುತ್ತಿವೆ. ಇನ್ನು ಮುಂದೆ ಬಳ್ಳಾರಿಗೆ ಬರುತ್ತೇನೆ ಎಂದು ಹೇಳಿದರು.  ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಾಲ್ಕು ಸ್ಥಳಗಳನ್ನು ಗುರುತಿಸಲಾಗಿದೆ. ಬಳ್ಳಾರಿ ಶಾಸಕರೊಂದಿಗೆ ಸೇರಿ ಸ್ಥಳ ಪರಿಶೀಲನೆ ಮಾಡುತ್ತೇವೆ. ಇಂದು ಜಾಗ ಅಂತಿಮವಾಗಲಿದ್ದು, ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

Shwetha M