200 ರೂ. ಸಿನಿಮಾ ಟಿಕೆಟ್ ದರಕ್ಕೆ ತಡೆಯಾಜ್ಞೆ ಬೆನ್ನಲ್ಲೇ ಟಿಕೆಟ್ ದರ ಏರಿಕೆ! – ಹೊಂಬಾಳೆ ಫಿಲ್ಮ್ಸ್ ಗೆ ಹೈಕೋರ್ಟ್​ ಶಾಕ್!‌

200 ರೂ. ಸಿನಿಮಾ ಟಿಕೆಟ್ ದರಕ್ಕೆ ತಡೆಯಾಜ್ಞೆ ಬೆನ್ನಲ್ಲೇ ಟಿಕೆಟ್ ದರ ಏರಿಕೆ! – ಹೊಂಬಾಳೆ ಫಿಲ್ಮ್ಸ್ ಗೆ ಹೈಕೋರ್ಟ್​ ಶಾಕ್!‌

ಸಿನಿಮಾ ಟಿಕೆಟ್ ದರ 200 ರೂ. ನಿಗದಿ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಇತ್ತೀಚೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಬೆನ್ನಲ್ಲೇ ಸಿನಿಮಾ ಟಿಕೆಟ್‌ ದರ ದುಪ್ಪಟ್ಟಾಗಿದೆ. ಇದೀಗ ಟಿಕೆಟ್ ದರ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮೇಲ್ಮವಿ ಸಲ್ಲಿಕೆ ಮಾಡಿದ್ದು, ಹೊಂಬಾಳೆ ಫಿಲ್ಮ್ಸ್ ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್​ಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್ ಪ್ರಚಾರ ಮಾಡಿದವರಿಗೆ ಬಿಗ್ ಶಾಕ್ – ಧವನ್‌, ರೈನಾ, ಯುವಿ ಆಸ್ತಿ ಜಪ್ತಿ?

ಕರ್ನಾಟಕದ ಸಿನಿಮಾ ಮಂದಿರದಲ್ಲಿ ಏಕರೂಪ ಟಿಕೆಟ್ ದರವನ್ನ ರಾಜ್ಯ ಸರ್ಕಾರ ನಿಗದಿ ಮಾಡಿತ್ತು. ಈ ಆದೇಶವನ್ನು ಪಿವಿಆರ್-ಐನಾಕ್ಸ್ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಈ ಬೆನ್ನಲ್ಲೇ ಕಾಂತಾರ: ಚಾಪ್ಟರ್ 1 ಸೇರಿದಂತೆ ಅನೇಕ ಸಿನಿಮಾಗಳಿಗೆ ದುಬಾರಿ ಟಿಕೆಟ್ ದರ ನಿಗದಿ ಮಾಡಲಾಗಿತ್ತು. ಈ ಬೆನ್ನಲ್ಲೇ ಸಿನಿಮಾ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ರು. ಟಿಕೆಟ್ ದರ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮೇಲ್ಮವಿ ಸಲ್ಲಿಕೆ ಮಾಡಿದೆ.

ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಾಗಿದೆ. ಸರ್ಕಾರದ ಪರ ಎಎಜಿ ಇಸ್ಮಾಯಿಲ್ ಜಬೀವುಲ್ಲಾ ವಾದ ಮಂಡಿಸಿದ್ದಾರೆ.  ಸರ್ಕಾರದ ನಿಯಮ ಕಾನೂನುಬದ್ಧ ಆಗಿದೆ ಎಂದು ಕೋರ್ಟ್​ಗೆ ಮನವರಿಕೆ ಮಾಡಿದ್ದಾರೆ. ವಾಣಿಜ್ಯ ಮಂಡಳಿ ಪರ ಹಿರಿಯ ವಕೀಲ ವಿ.‌ಲಕ್ಷ್ಮೀನಾರಾಯಣ ವಾದ ಮಾಡಿದ್ದಾರೆ. ‘ವಾಣಿಜ್ಯ ಮಂಡಳಿ ಮನವಿ ಮೇರೆಗೆ ಸರ್ಕಾರ ದರ ನಿಗದಿ ಮಾಡಿದೆ. ಹೀಗಾಗಿ ದರ ನಿಗದಿ ಆದೇಶಕ್ಕೆ ನೀಡಿದ ತಡೆಯಾಜ್ಞೆ ತೆರವು ಮಾಡಬೇಕು  ಎಂದು ಅವರು ಕೋರಿದ್ದಾರೆ. ಈ ವಿಚಾರವಾಗಿ ಹೊಂಬಾಳೆ ಫಿಲ್ಮ್ಸ್ ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್​ಗೆ ಹೈಕೋರ್ಟ್ ನೋಟಿಸ್ ನೀಡಿದೆ.

200 ರೂಪಾಯಿಗಿಂತ (ಶೇ.18 ಜಿಎಸ್​ಟಿ ಸೇರಿದರೆ 236 ರೂಪಾಯಿ) ಹೆಚ್ಚಿನ ಹಣ ಸಂಗ್ರಹ ಹೈಕೋರ್ಟ್ ತೀರ್ಪಿಗೆ ಒಳಪಡುತ್ತದೆ ಎಂದು ಕೋರ್ಟ್ ಹೇಳಿದೆ. ಒಂದೊಮ್ಮೆ ಅರ್ಜಿ ವಿಚಾರಣೆಯ ಬಳಿಕ ಸರ್ಕಾರದ ಪರ ಅಂತಿಮ ತೀರ್ಪು ಬಂದರೆ ಪ್ರೇಕ್ಷಕನಿಂದ ಪಡೆದ ಹೆಚ್ಚುವರಿ ಹಣ ಮರಳಿಸಬೇಕು ಎಂದು ಸೂಚನೆ ನೀಡಲಾಗಿದೆ.  ಈ ಬಗ್ಗೆ ಚಿತ್ರಮಂದಿರದಲ್ಲಿ ಪ್ರಕಟಿಸಲು ಕೋರ್ಟ್ ಸೂಚನೆ ನೀಡಿದೆ.

Shwetha M