ಮುಂಬರುವ ಎಲ್ಲಾ ಚುನಾವಣೆಗಳಿಗೆ JDS – BJP ಮೈತ್ರಿ! – ಹೆಚ್‌ಡಿ ದೇವೇಗೌಡ

ಮುಂಬರುವ ಎಲ್ಲಾ ಚುನಾವಣೆಗಳಿಗೆ JDS – BJP ಮೈತ್ರಿ! – ಹೆಚ್‌ಡಿ ದೇವೇಗೌಡ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ಎರಡು ವರ್ಷಗಳು ಪೂರೈಸಿದ್ದು, ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗಳ್ಳಲಿದೆ. ಈ ಬೆನ್ನಲ್ಲೇ ಸಿಎಂ ಬದಲಾವಣೆಯ ಕೂಗು ಕೇಳಿ ಬರ್ತಿದೆ. ಮತ್ತೊಂದ್ಕಡೆ ಈಗ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ  ಮುಂದುವರೆಯಲಿದೆ ಅಂತ   ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾನು ಮದ್ವೆಯಾಗಲು ರೆಡಿ! – ಹುಟ್ಟು ಹಬ್ಬದಂದೇ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌ ಕೊಟ್ಟ ರಚಿತಾ ರಾಮ್!‌

ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಟಿ ವೇಳೆ ದೇವೇಗೌಡರ ಬಳಿ ಜಿಬಿಎ ಚುನಾವಣೆಯಲ್ಲಿ  ಬಿಜೆಪಿ ಜೊತೆ ಮೈತ್ರಿ ಆಗ್ತೀರಾ ಎಂಬ ಪ್ರಶ್ನೆ ಕೇಳಲಾಯ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು,  ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಂದೂ ಆತಂಕ ಇಲ್ಲ. ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ. ನಮ್ಮ ಅವರ ಸಂಬಂಧ 10 ವರ್ಷದಿಂದ ಉತ್ತಮವಾಗಿದೆ. ನಾನು ಕಳೆದ 10 ವರ್ಷಗಳಲ್ಲಿ ಮೋದಿ ಬಗ್ಗೆ ಲಘುವಾಗಿ ಮಾತಾಡಿಲ್ಲ. ಇದ್ದರೆ ತೋರಿಸಿ ಎನ್ನುವ ಮೂಲಕ ನನ್ನ ಮೋದಿ ಸಂಬಂಧ ಉತ್ತಮವಾಗಿದ್ದು, ಇದೇ ಮೈತ್ರಿಗೆ ಅಡಿಪಾಯ. ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಕಾರಣದಿಂದ ಆತಂಕ ಆಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ. ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಿಗೂ ಈ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದರು.

ಕುಮಾರಸ್ವಾಮಿಯವರು 4 ತಿಂಗಳಿಂದ ನಮ್ಮ ರಾಜ್ಯದಲ್ಲಿ ಪ್ರವಾಸ ಮಾಡಿರಲಿಲ್ಲ. ಸ್ವಲ್ಪ ಆರೋಗ್ಯ ಸುಧಾರಣೆ ಆಗಬೇಕಿತ್ತು. ಆರೋಗ್ಯ ಸರಿಯಾಗಿದೆ, ಯಾವುದೇ ಸಮಸ್ಯೆ ಇಲ್ಲ. ಹೊರ ದೇಶದಿಂದ ಬಂದ ಡಾಕ್ಟರ್ ಪರಿಶೀಲನೆ ಮಾಡಿ ಯಾವುದೇ ಸಮಸ್ಯೆ ಇಲ್ಲ. ಅವರು ಎಷ್ಟು ಬೇಕಾದ್ರು ರಾಜಕೀಯದಲ್ಲಿ ಹೋರಾಟ ಮಾಡೋಕೆ ತೊಂದರೆ ಇಲ್ಲ ಎಂದಿದ್ದಾರೆ. ಕೆಲವೇ ದಿನಗಳಲ್ಲಿ ಅವರು ರಾಜ್ಯ ಪ್ರವಾಸ ಮಾಡ್ತಾರೆ ಎಂದು ಘೋಷಿಸಿದ್ದಾರೆ.

Shwetha M