ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಜೋಪಾನ! – ಸಿನಿ ಪ್ರೇಕ್ಷಕರಿಗೆ ರಾಜ್ಯ ಸರ್ಕಾರದ ಮಹತ್ವದ ಆದೇಶ!

ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ. ಈ ಬೆನ್ನಲ್ಲೇ ಚಿತ್ರಮಂದಿರಗಳು ಟಿಕೆಟ್ ದರ ಏರಿಕೆ ಮಾಡಿವೆ. ಇದೀಗ ರಾಜ್ಯ ಸರ್ಕಾರ ಸಿನಿ ಪ್ರೇಕ್ಷಕರಿಗೆ ಮಹತ್ವದ ಆದೇಶ ನೀಡಿದೆ.
ಇದನ್ನೂ ಓದಿ: ಈ ಹೊತ್ತಲ್ಲಿ ಮೊಸರು ತಿನ್ನುವುದು ಡೇಂಜರ್! – ಆರೋಗ್ಯ ಲಾಭಕ್ಕಿಂತ ನಷ್ಟವೇ ಹೆಚ್ಚು!
ರಾಜ್ಯದ ಮಲ್ಟಿಪ್ಲೆಕ್ಸ್ಗಳಲ್ಲಿನ ಚಲನಚಿತ್ರ ಪ್ರದರ್ಶನದ ಟಿಕೆಟ್ ಮೇಲೆ ವಿಧಿಸಿದ್ದ ₹200 ಮಿತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಲ್ಟಿಪ್ಲೆಕ್ಸ್ ಟಿಕೆಟ್ ದರ ತಡೆಯಾಜ್ಞೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ರಾಜ್ಯ ಸರ್ಕಾರ ಮನವಿಯೊಂದನ್ನ ಮಾಡಿದೆ. ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಚಲನಚಿತ್ರ ವೀಕ್ಷಿಸುವವರು ತಮ್ಮ ಟಿಕೆಟ್ ಮತ್ತು ಹಣ ಪಾವತಿಸಿದ ದಾಖಲೆಗಳನ್ನು ಜಾಗರೂಕತೆಯಿಂದ ಇಟ್ಟುಕೊಳ್ಳುವಂತೆ ಚಿತ್ರ ವೀಕ್ಷಕರಿಗೆ ಸರ್ಕಾರ ಸೂಚಿಸಿದೆ.
ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ಟಿಕೆಟ್ ದರಕ್ಕೆ ಸಂಬಂಧಿಸಿದಂತೆ ಭೌತಿಕವಾಗಿ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪಡೆದ ಟಿಕೆಟ್ಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಎಲ್ಲಾ ರೀತಿಯಾ ಸಿನಿಮಾ ಟಿಕೆಟ್ ಮಾರಾಟದ ಸಂಪೂರ್ಣ ದಾಖಲೆಗಳನ್ನ ಇಡಬೇಕೆಂದು ಆದೇಶಿಸಿದೆ.

ನೋಡಿರಿ

