ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ಬಲಿ! – ಮರದ ಕೊಂಬೆ ಬಿದ್ದು ಯುವತಿ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ ಎರಡು ದಿನಗಳಲ್ಲಿ ಬೆಂಗಳೂರಿನ ಹಲವೆಡೆ ಭಾರಿ ಮಳೆ ಸುರಿದಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಬೃಹತ್ ಗಾತ್ರದ ಮರ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ನಮ್ಮ ಮೆಟ್ರೋ ಇನ್ಮುಂದೆ ಬಸವ ಮೆಟ್ರೋ! – ಹೊಸ ಹೆಸರು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಘೋಷಿಸಿದ ಸಿಎಂ
ಕೀರ್ತನಾ (24) ಮೃತಪಟ್ಟ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡಲು ಹೋಗಿದ್ರು. ಕ್ರಿಕೆಟ್ ಮ್ಯಾಚ್ ನೋಡಿಕೊಂಡು ವಾಪಸ್ ಬರ್ತಿದ್ದ ವೇಳೆ ಸೋಲದೇವನಹಳ್ಳಿ ಬಳಿ ಎರಡು ಬೈಕ್ ಮೇಲೆ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್ನಲ್ಲಿದ್ದ ಭಾಸ್ಕರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಅವಘಡದಲ್ಲಿ ಗಾಯಗೊಂಡ ಇಬ್ಬರನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಬ್ಬರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೀರ್ತನಾ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ನೋಡಿರಿ

