ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಸುಧಾರಣೆ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಸುಧಾರಣೆ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಆರೋಗ್ಯ ಸುಧಾರಿಸುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿ ಕಚೇರಿಯಿಂದ ಹೇಳಿಕೆ ಬಿಡುಗಡೆಯಾಗಿದೆ. ಹೀರಾಬೆನ್ ಅವರ ಆರೋಗ್ಯವು ವೇಗವಾಗಿ ಸುಧಾರಿಸುತ್ತಿದೆ. ಇನ್ನೆರೆಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆಮ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಬುಧವಾರ ಗುಜರಾತ್​ನ ಅಹಮದಾಬಾದ್​​ನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:  ನರೇಂದ್ರ ಮೋದಿ ತಾಯಿಗೆ ಅನಾರೋಗ್ಯ – ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ

ಹೀರಾ ಬೆನ್ ಅವರು ನಿನ್ನೆ ರಾತ್ರಿಯಿಂದ ಆಹಾರ ಸೇವಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಅಹಮದಾಬಾದ್ ಆಸ್ಪತ್ರೆಗೆ ಭೇಟಿ ನೀಡಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರವೂ ಸಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದರು. ಆಸ್ಪತ್ರೆಯಲ್ಲಿ ತಾಯಿ ಜೊತೆ 1 ಗಂಟೆಗೂ ಹೆಚ್ಚು ಕಾಲ ಇದ್ದರು. ಹೀರಾಬೆನ್ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಜೊತೆ ಗಾಂಧಿನಗರ ಬಳಿಯ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.

suddiyaana