ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ – ಮುಂದಿನ 3 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ – ಮುಂದಿನ 3 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆ!

ಕೊಂಚ ಕಾಲ ಬ್ರೇಕ್‌ ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಶುರುಮಾಡಿದ್ದಾನೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಭಾರಿ ಮಳೆ ಸುರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದೆ.

ಇದನ್ನೂ ಓದಿ: ಬಿಹಾರ ಎಲೆಕ್ಷನ್ ನಂತ್ರ ರಾಜ್ಯ ಕಾಂಗ್ರೆಸ್‌ನಲ್ಲಿ ಕ್ರಾಂತಿ- ರಾಜ್ಯ ರಾಜಕೀಯದ ಬೆಳವಣಿಗೆ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಶುಕ್ರವಾರ ರಾತ್ರಿ ನಗರದ ಎಲೆಕ್ಟ್ರಾನಿಕ್‌ ಸಿಟಿ, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ, ಸರ್ಜಾಪುರ, ಮಹದೇವಪುರ, ಪೀಣ್ಯ, ದಾಸರಹಳ್ಳಿ, ಕೋರಮಂಗಲ, ಮಲ್ಲೇಶ್ವರ, ಮೆಜೆಸ್ಟಿಕ್, ಎಲೆಕ್ಟ್ರಾನಿಕ್ ಸಿಟಿ, ವಿಪ್ರೋ ಗೇಟ್, ಸರ್ಜಾಪುರ, ಯಶವಂತಪುರ, ಕಾರ್ಪೋರೇಷನ್, ಬಿಟಿಎಂ ಲೇಔಟ್, ವರ್ತೂರು ಬಳಗೆರೆ, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪರೇಶನ್, ಲಾಲ್‌ಬಾಗ್ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ. ಇದ್ರಿಂದಾಗಿ ಗುಂಡಿ ಬಿದ್ದ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಕಟ್ಟಿಕೊಂಡಿದ್ದು, ಅಲ್ಲಲ್ಲಿ ವಾಹನಗಳು ಕೆಟ್ಟುನಿಲ್ಲುವಂತಾಗಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದು, ವಾಹನ ಸವಾರರು ಪರದಾಡಿದ್ದಾರೆ.

ರಾಜ್ಯ ಹವಾಮಾನ ಇಲಾಖೆಯಿಂದ ಮಳೆಯ‌ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 3 ಗಂಟೆ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ. ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Shwetha M