6 ತಿಂಗಳೊಳಗಿನ ಮಗುವಿಗೆ ಕೆಮ್ಮಿನ ಸಿರಪ್ ನೀಡುವಂತಿಲ್ಲ! – ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಕೋಲ್ಡ್ರಿಫ್, ರೆಸ್ಪಿರ್ಫ್ರೆಶ್-ಟಿಆರ್ ಮತ್ತು ರೀಲೈಫ್ ಸಿರಪ್ಗಳನ್ನು ಮಾರುಕಟ್ಟೆಯಿಂದ ಹಿಂಪಡೆದು, ತಯಾರಿಕೆ ನಿಲ್ಲಿಸಲು ಆದೇಶಿಸಿದೆ. ಇದೀಗ ಕರ್ನಾಟಕದಲ್ಲೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಮೊನ್ನೆಯಷ್ಟೇ ಸಿರಪ್ ಬಳಕೆಗೆ ಆರೋಗ್ಯ ಇಲಾಖೆ ಗೈಡ್ಲೈನ್ಸ್ ಬಿಡುಗಡೆ ಮಾಡಿತ್ತು. ಇದೀಗ ವೈದ್ಯಕೀಯ ಶಿಕ್ಷಣ ಇಲಾಖೆ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಆರು ತಿಂಗಳ ಮಗುವಿಗೆ ಕೆಮ್ಮಿನ ಸಿರಪ್ ನೀಡಬಾರದು. ಮಗುವಿಗೆ ಎದೆಹಾಲು ಮಾತ್ರ ನೀಡಬೇಕು ಎಂದು ತಿಳಿಸಿದೆ.
ಇದನ್ನೂ ಓದಿ:ಕ್ಯಾಬ್ ಡ್ರೈಬರ್ ಟಿಪ್ಸ್ ಕೊಟ್ಟ ಮಹಿಳೆ! – ಅಯ್ಯೋ.. ಸಹಾಯ ಮಾಡಿದ್ದೇ ತಪ್ಪಾಯ್ತಾ?
ಕೆಮ್ಮಿನ ಸಿರಪ್ ಬಳಕೆಗೆ ಕರ್ನಾಟಕದ ಆರೋಗ್ಯ ಇಲಾಖೆಯಿಂದ ಕೂಡ ಮಾರ್ಗಸೂಚಿ ಬಿಡುಗಡೆ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆಯೂ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳು ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ. ಅದರಲ್ಲೂ ಹೆರಿಗೆ ಆಸ್ಪತ್ರೆಗಳು ಗರ್ಭಿಣಿಯರ ಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ಸೂಚಿಸಿದ್ದು, ಆಸ್ಪತ್ರೆಗೆ ಬರುವ ಬಾಣಂತಿಯರು ಮತ್ತು ಪೋಷಕರಿಗೆ ಸಿರಪ್ ಬಳಕೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುತ್ತಿದ್ದಾರೆ.
ಸಿರಪ್ ಬಳಕೆಗೆ ಮುಂಜಾಗ್ರತಾ ಕ್ರಮವೇನು?
- ಆರು ತಿಂಗಳ ಮಗುವಿಗೆ ಕೆಮ್ಮಿದ್ದರೆ ಎದೆ ಹಾಲುಣಿಸಬೇಕು. ಸಿರಪ್ ನೀಡಬಾರದು.
- ಮಗುವಿಗೆ ನ್ಯುಮೋನಿಯಾದಂತಹ ಲಕ್ಷಣ ಕಂಡುಬಂದಾಗ ಸಿರಪ್ ಬಳಕೆ ಮಾಡಬಾರದು. ವೈದ್ಯರ ಸಲಹೆ ಪಡೆಯಬೇಕು.
- ಮಗು ಅನಾರೋಗ್ಯ ತಪ್ಪಿದಾಗ ವೈದ್ಯರನ್ನ ಭೇಟಿ ಮಾಡಬೇಕು.
- ಮಗುವಿಗೆ ಕೆಮ್ಮು ಜಾಸ್ತಿ ಆದಾಗ ವೈದ್ಯರ ಸಲಹೆ ಮೇರೆಗೆ ಔಷಧಿ ಕೊಡಬೇಕು.
- ಯಾವುದೇ ಸಿರಪನ್ನು ದೀರ್ಘಕಾಲದವರೆಗೂ ಬಳಸಬಾರದು.
ಒಟ್ಟಾರೆ ಸಿರಪ್ ಬಗ್ಗೆ ಎಚ್ಚರಿಕೆಯ ಅಗತ್ಯವಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ವೈದ್ಯರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಿಯಮಗಳನ್ನ ಪಾಲಿಸಬೇಕಾಗಿದೆ.

ನೋಡಿರಿ

