ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ ಕೇಸರಿ ಧ್ವಜ! – ನ.25 ಕ್ಕೆ ಮೋದಿ ಧ್ವಜಾರೋಹಣ

ಕೋಟ್ಯಂತರ ಭಕ್ತರ ಕನಸಿನ ದೇಗುಲವಾದ ಅಯೋಧ್ಯೆಯ ರಾಮಮಂದಿರವನ್ನು ಲೋಕಸಭಾ ಚುನಾವಣೆಗೂ ಮುನ್ನ 2024ರ ಜನವರಿ 22ರಂದು ಉದ್ಘಾಟನೆ ಮಾಡಲಾಗಿತ್ತು. ಬಾಲ ರಾಮನನ್ನು ನೋಡಲು ನಿತ್ಯ ಸಾವಿರಾರು ಮಂದಿ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ.
ಇದನ್ನೂ ಓದಿ: ರೈಲು ಸೀಟಿಗಾಗಿ ಫೈಟ್! – ಪ್ರಯಾಣಿಕರ ಮೇಲೆ ಪೆಪ್ಪರ್ ಸ್ಪ್ರೇ ಹೊಡೆದ ಯುವತಿ!
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಧಾರ್ಮಿಕ ಸಮಿತಿಯ ಸದಸ್ಯರ ಮಹತ್ವದ ಸಭೆ ಜಾನಕಿ ಘಾಟ್‌ನ ವೈದೇಹಿ ಭವನದಲ್ಲಿ ನಡೆಯಿತು. ನವೆಂಬರ್ 25 ರಂದು ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದ ರೂಪುರೇಷೆಯನ್ನು ಸಭೆಯಲ್ಲಿ ಚರ್ಚಿಸಲಾಗಿದೆ. 191 ಅಡಿ ಎತ್ತರದ ರಾಮಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲು ನಿರ್ಧರಿಸಿದೆ. ಧ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿಯು ಒಮ್ಮತಕ್ಕೆ ಬಂದಿದೆ ಎಂದು ಧಾರ್ಮಿಕ ಸಮಿತಿಯ ಸದಸ್ಯ ಗೋಪಾಲ್ ರಾವ್ ಹೇಳಿದರು.
ದೀಪಾವಳಿ ಬಳಿಕ ಎಲ್ಲಾ ಅತಿಥಿಗಳಿಗೆ ಆಹ್ವಾನ ಪತ್ರಗಳನ್ನು ಕಳುಹಿಸಲಾಗುವುದು. ಎಂಟರಿಂದ ಹತ್ತು ಸಾವಿರ ಅತಿಥಿಗಳು ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಖಜಾಂಚಿ ಗೋವಿಂದ್ ದೇವಗಿರಿ, ಸದಸ್ಯರಾದ ಡಾ. ಅನಿಲ್ ಮಿಶ್ರಾ, ಗೋಪಾಲ್ ರಾವ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

ನೋಡಿರಿ

