ದಾಸನಿಗೆ ತಪ್ಪದ ಸಂಕಷ್ಟ – ದರ್ಶನ್‌ಗೆ ಮತ್ತೆ ಕಾಣಿಸಿಕೊಂಡ ಬೆನ್ನುನೋವು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್‌ಗೆ ಸಂಕಷ್ಟ ತಪ್ಪುತ್ತಿಲ್ಲ. ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿರುವ ದಾಸನಿಗೆ ನಕರ ದರ್ಶನವಾಗಿದೆ. ಮೂಲ ಸೌಕರ್ಯ ಕೂಡ ಸಿಗುತ್ತಿಲ್ಲ ಎಂದು ದರ್ಶನ್ ಕೋರ್ಟ್ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ಗೆ ಬೆನ್ನುನೋವು ಕಾಣಿಸಿಕೊಂಡಿದೆ.
ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಬಂದ ಹೆಚ್‌ಡಿ ರೇವಣ್ಣ ಕಾರು ತಡೆದ ಅಧಿಕಾರಿಗಳು!
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಜಾಮೀನು ಪಡೆದಿದ್ರು. ಜೈಲಿನಿಂದ ಹೊರ ಬರ್ತಿದ್ದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ ಕೂಡ ಮುಗಿಸಿದ್ರು. ಆದ್ರೆ ದರ್ಶನ್ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು. ದರ್ಶನ್‌ಗೆ ಬೇಲ್ ನೀಡಿರುವ ಹೈಕೋರ್ಟ್ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬೇಲ್ ರದ್ದು ಮಾಡಿತ್ತು. ಇದ್ರಿಂದಾಗಿ ದರ್ಶನ್ ಆಂಡ್ ಗ್ಯಾಂಗ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ದರ್ಶನ್‌ಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆ. ಬೆನ್ನು ನೋವು ಎಂದು ನಾಲ್ಕು ದಿನಗಳ ಹಿಂದೆ ಜೈಲಾಧಿಕಾರಿಗೆ ದೂರು ನೀಡಿದ್ದಾರೆ. ಕೊನೆಗೆ ಜೈಲಿನ ವೈದ್ಯಾಧಿಕಾರಿಗಳು ಅಲ್ಲಿಗೆ ತೆರಳಿ ಚಿಕಿತ್ಸೆ ನೀಡಿದ್ದಾರೆ. ಅಂತೆಯೇ ಪ್ರತಿ ನಿತ್ಯ ದರ್ಶನ್ ಹೆಲ್ತ್ ರಿಪೋರ್ಟ್ ಪಡೆಯುತ್ತಿದ್ದಾರೆ. ಪ್ರತಿನಿತ್ಯ ವೈದ್ಯರು ದರ್ಶನ್ ಅವರನ್ನು ತಪಾಸಣೆ ನಡೆಸ್ತಿದ್ದಾರೆ.
ಫಂಗಸ್ ಹಾಗೂ ವ್ಯವಸ್ಥೆ ಸರಿಯಿಲ್ಲ ಎಂದು ದರ್ಶನ್ ಕೋರ್ಟ್ಗೆ ಹೇಳಿದ್ದರು. ಇದೀಗ ಮೊದಲ ಬಾರಿಗೆ ಬೆನ್ನು ನೋವಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ ಮತ್ತೆ ಬೆನ್ನುನೋವು ಉಲ್ಬಣಗೊಂಡಿದೆ.

ನೋಡಿರಿ

