SSLC , PUC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! – ಇನ್ಮುಂದೆ 33% ಅಂಕ ಗಳಿಸಿದ್ರೂ ಪಾಸ್!

ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್‌ನ್ಯೂಸ್ ಕೊಟ್ಟಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಇನ್ನುಮುಂದೆ ಪಾಸ್ ಆಗಲು 35% ಮಾರ್ಕ್ ಪಡೆಯಬೇಕಿಲ್ಲ.. 33% ಮಾರ್ಕ್ ಬಂದ್ರೂ ಅದನ್ನ ಉತ್ತೀರ್ಣ ಎಂದು ಘೋಷಣೆ ಮಾಡಲಾಗುತ್ತದೆ.
ಇದನ್ನೂ ಓದಿ: ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್ – ಕುಟುಂಬ ಸಮೇತ ಆಗಮಿಸಿ ದೇವಿಯ ದರ್ಶನ ಪಡೆದ ಸಾಹಿತಿ
ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ದೊಡ್ಡ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು 33% ಪಾಸಿಂಗ್ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು 33% ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ. 2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಇನ್ಮು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (210 ಅಂಕಗಳು) ಪಡೆಯಬೇಕಿತ್ತು. ಹೊಸ ನಿಯಮದಂತೆ, 600 ಅಂಕಗಳಿಗೆ ಕನಿಷ್ಟ 198 ಅಂಕ (ಶೇ. 33) ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಅಂಕ ಸೇರಿ 30 ಅಂಕ ಬರುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಿದ್ರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದ್ರು.

ನೋಡಿರಿ

