ನಡು ರಸ್ತೆಯಲ್ಲೇ ಬೈಕ್ ಸವಾರನಿಗೆ ಕಪಾಳಮೋಕ್ಷ! – ಯುವಕನ ಮೇಲೆ ದರ್ಪ ತೋರಿದ ಟ್ರಾಫಿಕ್ ಪೊಲೀಸ್ ಸಸ್ಪೆಂಡ್!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿ ದರ್ಪ ಮೆರೆದಿರುವ ಘಟನೆ ನಡೆದಿದೆ. ಇದೀಗ ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟ್ರಾಫಿಕ್ ಪೊಲೀಸ್ ನಡೆ ವಿರುದ್ಧ ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: ನರೇಂದ್ರ ಮೋದಿ ಡೊನಾಲ್ಡ್ ಟ್ರಂಪ್ ಅವರನ್ನು ನೋಡಿ ಭಯಗೊಂಡಿದ್ದಾರೆ – ರಾಹುಲ್ ಗಾಂಧಿ
ಈ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಡೆದಿದೆ. ವೈರಲ್ ಆದ ವಿಡಿಯೋ ಪ್ರಕಾರ ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ಬಿಸಿ ವಾಗ್ವಾದ ನಡೆದಿದೆ. ಈ ವೇಳೆ ನೋಡ ನೋಡುತ್ತಲೇ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ವೈರಲ್ ವಿಡಿಯೋ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಟ್ರಾಫಿಕ್ ಪೊಲೀಸ್ ನಡೆ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದರೆ, ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಇದು ಸಂಪೂರ್ಣವಾಗಿ ಅಧಿಕಾರದ ದುರುಪಯೋಗವಾಗಿದೆ. ಈ ಘಟನೆಯು ಪೊಲೀಸ್ ಇಲಾಖೆ ಮೇಲಿನ ಹೊಣೆಗಾರಿಕೆ, ಶಿಸ್ತು ಮತ್ತು ಸಾರ್ವಜನಿಕ ನಂಬಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ. ಇದೀಗ ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ದಕ್ಷಿಣ ಸಂಚಾರ ಡಿಸಿಪಿ ಟ್ವೀಟ್ ಮಾಡಿದ್ದು, ಅನುಚಿತ ವರ್ತನೆಗಾಗಿ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
If the law is truly the same for everyone, then what action has been taken against them? A video is virally circulating on social media showing a police officer slapping a citizen during a routine traffic check. This is absolutely unacceptable and a clear misuse of… pic.twitter.com/pp7jJAXUuu
— Karnataka Portfolio (@karnatakaportf) October 15, 2025

ನೋಡಿರಿ

