ಬಿಗ್ ಬಾಸ್ ಮನೆಯಲ್ಲಿ ಬಿಗ್ ಟ್ವಿಸ್ಟ್! – ವೈಲ್ಡ್-ಕಾರ್ಡ್ ಮೂಲಕ ಎಂಟ್ರಿ ಕೊಡಲು ಸ್ಪರ್ಧಿಗಳು ರೆಡಿ!

ಬಿಗ್ ಬಾಸ್ ಕನ್ನಡ ಸೀಸನ್ 12 ಶೋರಲ್ಲಿ ದಿನಕ್ಕೊಂದು ಟ್ವಿಸ್ಟ್ ನೀಡಲಾಗ್ತಿದೆ. ಕಳೆದ ವಾರ ಎಲಿಮಿನೇಷನ್ ನಡೆದಿಲ್ಲ. ಆದ್ರೆ ಈ ವಾರ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ. ಈಗಾಗಲೇ ಕಲರ್ಸ್ ಕನ್ನಡ ವಾಹಿನಿ ಎಲಿಮಿನೇಷನ್ ಪ್ರಕ್ರಿಯೆಯ ಪ್ರೋಮೋ ರಿಲೀಸ್ ಮಾಡಿದೆ. ಈಗಾಗಲೇ ದೊಡ್ಮನೆಯಿಂದ ಒಬ್ಬರು ಔಟ್ ಆಗಿದ್ದಾರೆ ಎಂದು ಹೇಳಲಾಗ್ತಿದೆ. ಮತ್ತೊಂದ್ಕಡೆ ಈ ವಾರ ವೈಲ್ಡ್ ಕಾರ್ಡ್ ಎಂಟ್ರಿಯಾಗಲಿದೆ.
ಇದನ್ನೂ ಓದಿ: ಅಯ್ಯೋ.. ಈ ಸಾವು ನ್ಯಾಯವೇ..! – ಯುವಕನಿಗೆ ಚುಚ್ಚಿ ಪ್ರಾಣ ತೆಗೆದ ಕಿಲ್ಲರ್ ಫಿಶ್!
ಹೌದು, ಕಳೆದ ವೀಕೆಂಡ್‌ನಲ್ಲಿ ಕಿಚ್ಚ ಸುದೀಪ್ ಸ್ಪರ್ಧಿಗಳಿಗೆ ವಾರ್ನ್ ಮಾಡಿದ್ರು. ಈ ವಾರ ಏನ್ ಬೇಕಾದ್ರೂ ಆಗ್ಬೋದು. ಯಾರು ಬೇಕಾದ್ರೂ ದೊಡ್ಮನೆಯಿಂದ ಹೊರ ಹೋಗ್ಬೋದು. ಎಷ್ಟು ಜನ ಕೂಡ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಆಗ್ಬೋದು ಅಂತಾ ಹೇಳಿದ್ರು. ಇದೀಗ ದೊಡ್ಮನೆ ಅರ್ಧಕರ್ಧ ಖಾಲಿ ಆಗುವ ಜೊತೆ ಜೊತೆಗೇ ವೈಲ್ಡ್-ಕಾರ್ಡ್ ಮೂಲಕ ಹೊಸ ಸ್ಪರ್ಧಿಗಳು ಮನೆಯೊಳಗೆ ಎಂಟ್ರಿ ಕೊಡಲಿದ್ದಾರೆ. ಇದೀಗ ವೈಲ್ಡ್ ಕಾರ್ಡ್ ಮೂಲಕ ಮನೆಯೊಳಗೆ ಪ್ರವೇಶಿಸಲು ಮೊದಲ ಬ್ಯಾಚ್ ರೆಡಿ ಆಗಿದೆಯಂತೆ. ಹೀಗೆಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಹಾಗಾದರೆ, ವೈಲ್ಡ್ ಕಾರ್ಡ್ ಮೂಲಕ ಮನೆಯೊಳಗೆ ಪ್ರವೇಶಿಸುವ ಸದಸ್ಯರು ಯಾರೆಲ್ಲ ಇರಬಹುದು ಎಂಬುದನ್ನು ನೋಡೋಣ.
ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುವ ರಾಮಾಚಾರಿ ಸೀರಿಯಲ್‌ನಲ್ಲಿ ರುಕ್ಮಿಣಿ ಪಾತ್ರದಲ್ಲಿ ನಟಿಸಿದ್ದ ದೇವಿಕಾ ಭಟ್ ಅವರು ಬಿಗ್ ಬಾಸ್ ಮನೆಯೊಳಗೆ ವೈಲ್ಡ್ ಕಾರ್ಡ್ ಮೂಲಕ ಹೋಗಿದ್ದಾರಂತೆ. ಇನ್ನು ಇವರ ಜೊತೆ ವಿಜಯ್ ಸೂರ್ಯ ಅವರು ಶೋಗೆ ಹೋಗ್ತಾರೆ ಎನ್ನಲಾಗಿತ್ತು. ಆದರೆ ಅವರು ಹೋಗಿರಲಿಲ್ಲ. ಈ ಬಾರಿ ಅವರು ವೈಲ್ಡ್- ಕಾರ್ಡ್ ಮೂಲಕ ದೊಡ್ಮನೆ ಒಳಗೆ ಎಂಟ್ರಿ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗೆಯೇ ರಾಮಾಚಾರಿ ಸೀರಿಯಲ್ ಖ್ಯಾತಿಯ ಮೌನಾ ಗುಡ್ಡೇಮನೆ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.
ಇನ್ನು ರಾಧಾ ರಮಣ ಸೀರಿಯಲ್ ಖ್ಯಾತಿಯ ಶ್ವೇತಾ ಪ್ರಸಾದ್ ಸಹ ಬಿಗ್ ಬಾಸ್ ಮನೆಯೊಳಗೆ ವೈಲ್ಡ್ ಕಾರ್ಡ್ ಮೂಲಕ ಕಾಲಿಟ್ಟಿದ್ದಾರಂತೆ. ಮಾಂಗಲ್ಯಂ ತಂತುನಾನೇನ ಧಾರಾವಾಹಿ ನಟ ಆರ್ ಕೆ ಚಂದನ್ ಅವರು ಕ್ವಾಟ್ಲೆ ಕಿಚನ್ ಶೋನಲ್ಲಿ ಭಾಗವಹಿಸಿದ್ದರು. ಈಗ ಅವರು ಸಿನಿಮಾವನ್ನು ಕೂಡ ಮಾಡುತ್ತಿದ್ದಾರೆ. ಚಂದನ್ ಅವರು ಕೂಡ ಈ ವೀಕೆಂಡ್ ಮನೆಯೊಳಗೆ ತೆರಳಲಿದ್ದಾರಂತೆ.

ನೋಡಿರಿ

