ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಸುಟ್ಟು ಭಸ್ಮ! – ಮಹಿಳೆಯ ಸಮಯಪ್ರಜ್ಞೆಯಿಂದ ಉಳಿಯಿತು 36 ಪ್ರಯಾಣಿಕರ ಪ್ರಾಣ!

ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಹೊರಟಿದ್ದ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜ್‌ನಲ್ಲಿ ರೇ*ಪ್- ಜ್ಯೂ. ವಿದ್ಯಾರ್ಥಿಯಿಂದ ಸಿನೀಯರ್ ವಿದ್ಯಾರ್ಥಿನಿ ಮೇಲೆ ಕೃತ್ಯ
ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್ ಬೆಂಗಳೂರು – ರಾಯಚೂರಿಗೆ ಹೊರಟಿತ್ತು. ಈ ಬಸ್‌ನಲ್ಲಿ 36 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗ್ತಿದೆ. ಮುಂಜಾನೆ 2 .30 ರ ಸುಮಾರಿಗೆ ಅನಂತಪುರ ಹೈವೇಗೆ ತಲುತ್ತಿದ್ದಂತೆ ಬಸ್ ಟಯರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್ ಆಗಿದೆ. ಕೂಡಲೇ ಎಚ್ಚೆತ್ತುಕೊಂಡ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನೂ ಬಿಟ್ಟು ಬಸ್‌ನಿಂದ ಜಿಗಿದಿದ್ದಾರೆ. ಹೀಗಾಗಿ ಪ್ರಯಾಣಿರ ಸಂಪೂರ್ಣ ಲಗೇಜ್‌ಗಳು ಬೆಂಕಿಗೆ ಆಹುತಿಯಾಗಿದೆ. ವಿದ್ಯಾರ್ಥಿಗಳ ಪ್ರಮಾಣ ಪತ್ರ, ದುಬಾರಿ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಇನ್ನು ಬಸ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದರೂ ಚಾಲಕ ನಿರ್ಲಕ್ಷ್ಯ ವಹಿಸಿದ್ದಾನೆ. ಇದೇ ವೇಳೆ ನಿದ್ರೆ ಮಂಪರಿನಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಎಚ್ಚರವಾಗಿದೆ. ಕೂಡಲೇ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿ ಕಿರುಚಿದ್ದಾರೆ. ಆದಾಗ್ಯೂ ಡ್ರೈವರ್ ಅರ್ಧ ಕಿಮೀ ಬಸ್ ನಿಲ್ಲಿಸದೇ ಹೊರಟಿದ್ದಾನೆ ಎಂಬ ಆರೋಪ ಕೂಡ ಕೇಳಿಬಂದಿದೆ. ಸದ್ಯ ಪ್ರಯಾಣಿಕರು ಸೇಫ್ ಆಗಿದ್ದರೂ, ಅವರ ಬಳಿಯಿದ್ದ ಮಹತ್ವದ ದಾಖಲೆಗಳು, ಹಬ್ಬಕ್ಕೆ ಕೊಂಡೊಯ್ಯುತ್ತಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿದೆ. ಹೀಗಾಗಿ ಪ್ರಯಾಣಿಕರು ಗ್ರೀನ್‌ಲೈನ್ ಟ್ರಾವೆಲ್ಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನೋಡಿರಿ

