ಶವ ಹೂತಿಟ್ಟ ಕೇಸ್! – ಧರ್ಮಸ್ಥಳದ ಪೊಲೀಸರಿಗೂ ಶಾಕ್ ಕೊಟ್ಟ ಎಸ್ಐಟಿ!

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ಇದೀಗ ಈ ಕೇಸ್ ನ ತನಿಖೆ ಚುರುಕುಗೊಂಡಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನ ಇತ್ತೀಚೆಗೆ ಒಂದೇ ಜಾಗದಲ್ಲಿ 10 ಶವ ಹೂತಿಟ್ಟಿದ್ದೇನೆ ಎಂದು ಹೇಳಿದ್ದು, ಈ ಸಂಬಂಧ ಆತನ ವಿಚಾರಣೆ ನಡೆಯುತ್ತಿದೆ. ಇದೀಗ ಈ ಪ್ರಕರಣ ಸಂಬಂಧ ಎಸ್ಐಟಿ ಧರ್ಮಸ್ಥಳದ ಪೊಲೀಸರಿಗೂ ಶಾಕ್ ಕೊಟ್ಟಿದೆ.
ಇದನ್ನೂ ಓದಿ: ರಕ್ಷಿತಾ ಶೆಟ್ಟಿ Idiot.. ಜಾಹ್ನವಿ, ಅಶ್ವಿನಿಗೆ ಮಾತ್ರ ಮರ್ಯಾದೆನಾ? – ಕುಡ್ಲದ ಹುಡುಗಿಗೆ ಬೈಯೋದು Easyನಾ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಚಿನ್ನಯ್ಯನ ವಿಚಾರಣೆ ಈಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡುವ ವೇಳೆ ಚಿನ್ನಯ್ಯ, ಒಂದೇ ಜಾಗದಲ್ಲಿ ಹತ್ತು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದ. ಇದೀಗ 10 ಶವ ಹೂತು ಹಾಕಿದ್ದು ಯಾವಾಗ ಎಂದು ಪತ್ತೆ ಹಚ್ಚಲು ಎಸ್ಐಟಿ ತಂಡ ದಾಖಲೆಗಳ ಹುಡುಕಾಟ ನಡೆಸುತ್ತಿದೆ. ಮತ್ತೆ ಎಲ್ಲ ಆತ್ಮಹತ್ಯೆಗಳ ಮರಣೋತ್ತರ ಪರೀಕ್ಷಾ ವರದಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. 10 ಶವ ಹೂತು ಹಾಕಿದ ಕುರಿತು ಧರ್ಮಸ್ಥಳ ಗ್ರಾಮ ಪಂಚಾಯ್ತಿನಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖಾಧಿಕಾರಿ ಜೀತೇಂದ್ರ ಕುಮಾರ್ ದಯಮಾ ನೇತೃತ್ವದಲ್ಲಿ ಇದರ ವಿಚಾರಣೆ ನಡೆಯುತ್ತಿದೆ. ಇದೀಗ ಧರ್ಮಸ್ಥಳದಲ್ಲಿ ಕಾರ್ಯ ನಿರ್ವಹಿಸಿದ ಪೊಲೀಸರನ್ನ ಕೂಡ ವಿಚಾರಣೆ ನಡೆಸಲಾಗುತ್ತಿದೆ.
1995 ರಿಂದ 2014ರ ವರೆಗೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಔಟ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೂ ವಿಶೇಷ ತನಿಖಾ ತಂಡ(ಎಸ್ಐಟಿ)ದ ತನಿಖೆಯ ಬಿಸಿ ಮುಟ್ಟಿದೆ. ಈ ಅವಧಿಯಲ್ಲಿ ಆತ್ಮಹತ್ಯೆ ನಡೆಸಿದ ವ್ಯಕ್ತಿಗಳ ಶವಗಳ ವಿಲೇವಾರಿ ವೇಳೆ ಅಕ್ರಮವಾಗಿದೆ ಎಂದು ಆರೋಪಿಸಿ ದೂರುದಾರ ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ ಹಿನ್ನೆಲೆಯಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಅಂದು ಇಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರನ್ನು ಕರೆಸಿಕೊಂಡಿದೆ.
ಸದ್ಯ ವಿವಿಧ ಠಾಣೆಗಳಲ್ಲಿ ಈ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶವ ವಿಲೇವಾರಿ ದಾಖಲೆ ಪರಿಶೀಲನೆ ವೇಳೆ ಗೊಂದಲ ಕಂಡುಬಂದಿದ್ದು, ಈ ಪೊಲೀಸರ ಮೇಲೆ ಅರಣ್ಯ ಭೂಮಿಯಲ್ಲಿ ಶವ ದಫನ ಮಾಡಿರುವ ಆರೋಪ ಸೇರಿದಂತೆ ಆತ್ಮಹತ್ಯೆ ಮಾಡಿಕೊಂಡವರ ಶವಗಳನ್ನು ಒಂದೇ ದಿನದಲ್ಲಿ ದಫನ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ. ಧರ್ಮಸ್ಥಳ ಔಟ್ ಪೋಸ್ಟ್ನಲ್ಲಿ ಆಗ ಕರ್ತವ್ಯದಲ್ಲಿದ್ದ ಬಹುತೇಕ ಎಲ್ಲ ಪೊಲೀಸರಿಗೂ ಎಸ್ಐಟಿ ಬುಲಾವ್ ಮಾಡಿದ್ದು, ಅವರಿಂದ ಹೇಳಿಕೆ ದಾಖಲು ಪ್ರಕ್ರಿಯೆ ಆರಂಭಿಸಲಾಗಿದೆ.

ನೋಡಿರಿ

