ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಸೊನ್ನೆಗೆ ಔಟ್

ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಬಲಗೈ ವೇಗಿ ಕ್ಸೇವಿಯರ್ ಬಾರ್ಟ್ಲೆಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರ ನಡೆದರು.
ಇದನ್ನೂ ಓದಿ: ತ್ಯಾಗದ ಮೂಲಕ ಮನೆ ಮಂದಿ ಮನಸ್ಸು ಗೆದ್ದ ಸೂರಜ್! – ರಿಷಾ, ರಘು ಸ್ವಾರ್ಥ.. ಮನೆ ಮಂದಿ ಆಕ್ರೋಶ!
ಇದಕ್ಕೂ ಮುನ್ನ ಪರ್ತ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಶೂನ್ಯಕ್ಕೆ ಕ್ಯಾಚಿತ್ತು ನಿರ್ಗಮಿಸಿದ್ದರು. ಇದೀಗ ಮತ್ತೊಮ್ಮೆ ಸೊನ್ನೆ ಸುತ್ತುವ ಮೂಲಕ ನಿರಾಸೆ ಮೂಡಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಶುಭ್ಮನ್ ಗಿಲ್ (9) ಹಾಗೂ ವಿರಾಟ್ ಕೊಹ್ಲಿ (0) ವಿಕೆಟ್ ಕಳೆದುಕೊಂಡಿದೆ. ರೋಹಿತ್ ಶರ್ಮಾ 73 ರನ್ಗಳಿಸಿ ಔಟ್ ಆಗಿದ್ದಾರೆ. 31 ಓವರ್ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಕೇವಲ 144 ರನ್ ಕಲೆಹಾಕಿದೆ.

ನೋಡಿರಿ

