ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌! – ಯತೀಂದ್ರ ಹೇಳಿಕೆಗೆ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ

ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌! – ಯತೀಂದ್ರ ಹೇಳಿಕೆಗೆ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿ ಕೇಳಿಬರುತ್ತಿದೆ. ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿ ನಡೆಯಲಿದೆ ಎಂಬ ಮಾತು ಕೇಳಿಬರ್ತಿದೆ. ಇವೆಲ್ಲದ್ರ ನಡುವೆ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಗಾಲದಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಲಿದ್ದಾರೆ ಎಂದು ಹೇಳಿದ್ರು. ಇದೀಗ ಸತೀಶ್‌ ಜಾರಕಿಹೊಳಿ ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ತ್ಯಾಗದ ಮೂಲಕ ಮನೆ ಮಂದಿ ಮನಸ್ಸು ಗೆದ್ದ ಸೂರಜ್‌! – ರಿಷಾ,  ರಘು ಸ್ವಾರ್ಥ.. ಮನೆ ಮಂದಿ ಆಕ್ರೋಶ!

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ.   ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಏನೇ ಆಗಲಿ ಅದನ್ನು ಪಕ್ಷ ನಿರ್ಧಾರ ಮಾಡಲಿದೆ. ಯತಿಂದ್ರ ಅವರು ಅವರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಲ್ಲವನ್ನೂ ಕಾಕತಿಯಲ್ಲಿ ನಿಂತು ನಿರ್ಧಾರ ಮಾಡಲು ಸಾಧ್ಯವಿಲ್ಲ. ಡಿಸೆಂಬರ್‌ ಕ್ರಾಂತಿಯ ಬಗ್ಗೆ ನಮಗೆ ಗೊತ್ತೇ ಇಲ್ಲ. ಸಿದ್ದರಾಮಯ್ಯನವರ ನಂತರ ಪಕ್ಷವನ್ನು ಮುನ್ನಡೆಸುವ ವಿಚಾರಕ್ಕೆ, ಎಲ್ಲವನ್ನೂ ಕಾದು ನೋಡೋಣ ಎಂದು ಜಾರಕಿಹೊಳಿ ಹೇಳಿದ್ರು.

Shwetha M