ಜೆಡಿಎಸ್ ನಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುತ್ತಾ? – ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಜೆಡಿಎಸ್ ನಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುತ್ತಾ? – ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗ್ತಿದೆ. ಒಂದ್ಕಡೆ ಸಿಎಂ ಬದಲಾವಣೆ ಚರ್ಚೆ ಜೋರಾಗಿ ನಡೆಯುತ್ತಿದೆ. ಇದೀಗ ರಾಜ್ಯ ಜೆಡಿಎಸ್‌ನಲ್ಲೂ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಈ ಬಗ್ಗೆ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಎಂದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಹೆಚ್‌ಡಿ ಕುಮಾರಸ್ವಾಮಿ, ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಸಮನ್ವಯ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಕೋರ್ ಕಮಿಟಿ ಪುನರ್ ರಚನೆ ವಿಚಾರ ಸಂಬಂಧ ಮಾತನಾಡಿ, ಕೋರ್ ಕಮಿಟಿ ಪುನರ್ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ ಪಕ್ಷ ಸಂಘಟನೆಗೆ ಸಮಿತಿ ಮಾಡುವ ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ನಾವು ಅದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು. ಇದನ್ನೂ ಓದಿ: ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

Shwetha M