ಚೀನಾ ಸೇರಿದಂತೆ ಆರು ದೇಶಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಚೀನಾ ಸೇರಿದಂತೆ ಆರು ದೇಶಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ನವದೆಹಲಿ: ಜಗತ್ತಿನಲ್ಲಿ ಕೊರೊನಾ ಆತಂಕ ಆವರಿಸುತ್ತಿದ್ದಂತೆ ಚೀನಾ ಸೇರಿದಂತೆ ಆರು ದೇಶಗಳಿಂದ ಬರುವ ವಿಮಾನ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಜನವರಿ ಒಂದರಿಂದಲೇ ಈ ಆದೇಶ ಜಾರಿಯಾಗಿದೆ.

ಇದನ್ನೂ ಓದಿ:  ಜನಸಂಖ್ಯೆ ಕಡಿಮೆಯಿರುವ ದೇಶಗಳಿಗೆ ವರವಾಗಲಿದೆಯಾ ‘ಕೃತಕ ಗರ್ಭಾಶಯದ ಸೌಲಭ್ಯ’..!

ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್ ಅನ್ನು ಅಪ್ಲೋಡ್ ಮಾಡಬೇಕು. ಭಾರತಕ್ಕೆ ಪ್ರಯಾಣ ಬೆಳೆಸುವ 72 ಗಂಟೆಗಳಿಗೂ ಮುನ್ನ ಅವರು ಕೊವಿಡ್ ಪರೀಕ್ಷೆ  ನಡೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಾದ್ಯಂತ ಅದರಲ್ಲೂ ಮುಖ್ಯವಾಗಿ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್ ದೇಶಗಳಲ್ಲಿ ಹೆಚ್ಚುತ್ತಿರುವ ಕೊವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮ ಜಾರಿಗೊಳಿಸಲಾಗಿದೆ. ಭಾರತದಲ್ಲಿ ಗುರುವಾರ 268 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು.

suddiyaana