ಶಿರಾಡಿ ಘಾಟ್‌ನಲ್ಲಿ 40 ಅಡಿ ಪ್ರಪಾತಕ್ಕೆ ಬಿದ್ದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು!

ಶಿರಾಡಿ ಘಾಟ್‌ನಲ್ಲಿ 40 ಅಡಿ ಪ್ರಪಾತಕ್ಕೆ ಬಿದ್ದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು!

ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗ್ತಿದೆ. ವಾಹನ ಸವಾರು ರಸ್ತೆಯಲ್ಲಿಯಲ್ಲಿ ಓಡಾಡುವಾಗ ಎಚ್ಚರಿಕೆಯಿಂದ ಇರಬೇಕು. ಇದೀಗ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ ಕಾರೊಂದು ರಸ್ತೆಬದಿಯ ಹೊಳೆಗೆ ಬಿದ್ದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ನಾ ನಿನ್ನ ಬಿಡಲಾರೆ ಸೀರಿಯಲ್‌ನಿಂದ ಹೊರನಡೆದ ರುಹಾನಿ ಶೆಟ್ಟಿ – ಮಾಯಾ ಪಾತ್ರಕ್ಕೆ ರಮ್ಯಾ ಎಂಟ್ರಿ

ದಾವಣಗೆರೆ ಜಿಲ್ಲೆಯ ಚನ್ನಗಿರಿಯ ನಿವಾಸಿ ಗೋವಿಂದ್‌ ಎಂಬುವವರು ತಮ್ಮ ಕುಟುಂಬದೊಂದಿಗೆ ಮಂಗಳೂರಿಗೆ ತೆರಳಿದ್ದರು. ಶಿರಾಡಿಘಾಟ್‌ ತಲುಪುತ್ತಿದ್ದಂತೆ ಕಾರು ನಿಯಂತ್ರಣ ತಪ್ಪಿದ್ದು, 40 ಅಡಿ ಎತ್ತರದಿಂದ ಹೊಳೆಗೆ ಬಿದ್ದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ಕಾರಿನಲ್ಲಿ ಗೋವಿಂದ್, ಪತ್ನಿ ಆಶಾ ಮಕ್ಕಳಾದ ಹರ್ಷಿತ್, ವರ್ಷಿತ್ ನಾಲ್ವರು ಇದ್ದರು ಎನ್ನಲಾಗಿದೆ.

ಕಾರು ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮಳೆಗಾಲ ಮತ್ತು ಚಳಿಗಾಲ ಸಂದರ್ಭದಲ್ಲಿ ಮಂಜಿನಿಂದಾಗಿ ಗೋಚರತೆ ಕಡಿಮೆ ಇರುತ್ತದೆ. ದಟ್ಟ ಮಂಜಿನಿಂದ ರಸ್ತೆ ಕಾಣದೇ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕಾರು ಬಹುತೇಕ ನಜ್ಜುಗುಜ್ಜಾಗಿದೆ. ಕ್ರೇನ್‌ ಮೂಲಕ ಕಾರು ಮೇಲೆತ್ತುವ ಕಾರ್ಯ ನಡೆಯುತ್ತಿದೆ.

Shwetha M