ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಅಕ್ಕ ತಂಗಿ ದುರಂತ ಅಂತ್ಯ – ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಸಾವು!

ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಅಕ್ಕ ತಂಗಿ ದುರಂತ ಅಂತ್ಯ – ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಸಾವು!

ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸ್ನಾನ ಮಾಡಲು ಹೋಗಿದ್ದ ಅಕ್ಕ ತಂಗಿ ಗ್ಯಾಸ್‌ ಗೀಸರ್‌ ಸೋರಿಕೆಯಿಂದಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಲ್ಲಿ ರಕ್ಷಿತಾಗೆ ಮತ್ತೆ ಅವಮಾನ! – ಸೆಡೆ ಎಂದು ಬೈದ ಕಾಕ್ರೋಚ್‌ ಸುಧಿಗೆ ಕಿಚ್ಚನ ಕ್ಲಾಸ್‌ ಫಿಕ್ಸ್?!

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ.

ಗುಲ್ಫಾರ್ಮ್ , ತಂಗಿ ಸಿಮ್ರಾನ್ ತಾಜ್ ಇಬ್ಬರು ಒಟ್ಟಿಗೆ ಸ್ನಾನಕ್ಕೆ ತೆರಳಿದ್ದರು. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್‌ ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ. ಬಳಿಕ ಬಾಗಿಲು ಬಡಿದು ಬಾತ್‌ರೂಮ್‌ ತೆರೆದು ನೋಡಿದ್ದಾರೆ. ಈ ವೇಳೆ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದರು. ತಕ್ಷಣ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು. ಗುಲ್ಫಾರ್ಮ್ , ಸಿಮ್ರಾನ್ ತಾಜ್ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Shwetha M