ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿ! – ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ದ ಎಂದ ಕೃಷ್ಣಭೈರೇಗೌಡ

ನವೆಂಬರ್ ತಿಂಗಳಿಗೆ ಕೌಂಡ್ಡೌನ್ ಶುರುವಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡುವರೆ ವರ್ಷ ಆಗುತ್ತಿದೆ. ಸಂಪುಟ ಪುನರ್ ರಚನೆ ಚರ್ಚೆ ಜೋರಾಗಿದ್ದು, ಈ ಸಂಬಂಧ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಸಿಎಂ ಸಿದ್ದರಾಮಯ್ಯ ಸಚಿವರಿಗೆ ಹೇಳಿ ಆಗಿದೆ. ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸಚಿವರು ತ್ಯಾಗದ ಮಾತುಗಳನ್ನಾಡಿದ್ದಾರೆ.
ಇದನ್ನೂ ಓದಿ: ಗಿಲ್ಲಿ ಮೀಸೆ ಬೋಳಿಸಿದ್ದು ಹೊಟ್ಟೆಕಿಚ್ಚಿಗಾ? – ಗಿಲ್ಲಿನಟನ ಕಿಚ್ಚ ಸುದೀಪ್ ಹೊಗಳಿದ್ರೆ ಉರಿನಾ?
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೃಷ್ಣಭೈರೇಗೌಡ, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶಗಳನ್ನು ಪಕ್ಷ ನೀಡಿದೆ. ನನ್ನನ್ನು ಗುರುತಿಸಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿರುವುದಕ್ಕೆ ಆಭಾರಿಯಾಗಿದ್ದೇನೆ. ನಾನು ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ದ ಎಂದು ಅವರು ಹೇಳಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದರು. ಸಂಪುಟ ಪುನಾರಚನೆ ಸಂಬಂಧ ಚರ್ಚೆಗಾಗಿಯೇ ಈ ಔತಣಕೂಟ ಏರ್ಪಟ್ಟಿತ್ತು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ, ಈ ಚರ್ಚೆಯನ್ನು ಮುಖ್ಯಮಂತ್ರಿಗಳು ಹಾಗೂ ಇತರ ಕಾಂಗ್ರೆಸ್ ನಾಯಕರು ನಿರಾಕರಿಸಿದ್ದರು. ಕಾಂಗ್ರೆಸ್ ಪಕ್ಷದ ಆಂತರಿಕ ಕಲಹ ಜೋರಾಗಿರುವ ಸಂದರ್ಭದಲ್ಲಿ ಕೃಷ್ಣಭೈರೇಗೌಡರು ಈ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ನವೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ಬದಲಾವಣೆಯಾಗಲಿದೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗಿದೆ.

ನೋಡಿರಿ

