ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಅಗಲಿ ನಾಲ್ಕು ವರ್ಷ – ನಗುಮೊಗದ ಅಪ್ಪು ಅಭಿಮಾನಿಗಳ ಮನದಲ್ಲಿ ಶಾಶ್ವತ!

ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಅಗಲಿ ನಾಲ್ಕು ವರ್ಷ – ನಗುಮೊಗದ ಅಪ್ಪು ಅಭಿಮಾನಿಗಳ ಮನದಲ್ಲಿ ಶಾಶ್ವತ!

ನಗುಮೊಗದ ರಾಜಕುಮಾರ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಮ್ಮನ್ನ ಅಗಲಿ ಇಂದಿಗೆ ನಾಲ್ಕು ವರ್ಷ. ಅಪ್ಪು ದೈಹಿಕವಾಗಿ ನಮ್ಮಿಂದ ದೂರವಾಗಿದ್ರೂ, ಅವರು ಕರುನಾಡಿನ ಜನರ ಮನದಲ್ಲಿ ಸದಾ ಜೀವಂತವಾಗಿದ್ದಾರೆ.

ಇದನ್ನೂ ಓದಿ: ಶ್ರೇಯಸ್ ಅಯ್ಯರ್ ಗುಲ್ಮ(ಪಕ್ಕೆಲುಬಿನ ಮೇಲ್ಭಾಗದ ಅಂಗ) ಛಿದ್ರ – ಸಿಡ್ನಿ ಆಸ್ಪತ್ರೆಯಲ್ಲಿ ಆಪರೇಷನ್ ಸಕ್ಸಸ್

ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ 4ನೇ ಪುಣ್ಯಸ್ಮರಣೆ. ಪುನೀತ್ ರಾಜ್‌ಕುಮಾರ್ ಅಕ್ಟೋಬರ್-29 ರಂದು ಕೊನೆಯುಸಿರಳೆದರು. ಇಷ್ಟು ಬೇಗ ಇವರ ಸಾವು ಆಗುತ್ತೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆದರೆ, 46 ನೇ ವಯಸ್ಸಿಗೇನೆ ಅಪ್ಪು ಎಲ್ಲರನ್ನೂ ಬಿಟ್ಟು ಹೋದರು. ಇಂದು ಅಪ್ಪು 4ನೇ ಪುಣ್ಯಸ್ಮರಣೆ. ಇಂದು ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಸಮಾಧಿಗೆ ಬಣ್ಣ ಬಣ್ಣದ ಗುಲಾಬಿ ಹೂವಿನ ಅಲಂಕಾರ ಮಾಡಲಾಗಿದೆ. ದೊಡ್ಮನೆ ಕುಟುಂಬ ಬೆಳಗ್ಗೆ ಪುನೀತ್ ಸಮಾಧಿಗೆ ಪೂಜೆ ನೆರವೇರಿಸಿದ್ದಾರೆ. ಇಷ್ಟದ ಖಾದ್ಯಗಳನ್ನಿಟ್ಟು ಪೂಜೆ ಮಾಡಿದ್ದಾರೆ.

ಅಪ್ಪು ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬಳಿ ಇಂದು ಇಡೀ ದಿನ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ, ರಕ್ತದಾನ ಶಿಬಿರಗಳ ಆಯೋಜನೆ ಮಾಡಿಕೊಂಡಿದ್ದಾರೆ. ರಾಜ್ಯದ ಮೂಲೆ ಮೂಲಗಳಿಂದ ಅಭಿಮಾನಿಗಳು ಆಗಮಿಸಿ, ಅಪ್ಪುಗೆ ನಮನ ಸಲ್ಲಿಸಲಿದ್ದಾರೆ. ಅಲ್ಲದೇ, ರಾಜ್ಯಾದ್ಯಂತ ಅವರ ಅಭಿಮಾನಿಗಳು ತಾವಿರುವ ಸ್ಥಳದಿಂದಲೇ ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.

Shwetha M