ಡಿಕೆಶಿ ಸಿಎಂ ಆದ್ರೆ ಕಾಂಗ್ರೆಸ್ ಕಚೇರಿಗಳಿಗೆ ಬೀಗ! – ಮುಖ್ಯಮಂತ್ರಿ ಬದಲಾವಣೆ ಕುರಿತು ಕೆ.ಎನ್.ರಾಜಣ್ಣ ರಿಯಾಕ್ಷನ್!

ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿ ಕೇಳಿಬರುತ್ತಿದೆ. ನವೆಂಬರ್‌ನಲ್ಲಿ ಏನೂ ನಡೆಯಲ್ಲ.. ಐದು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳುತ್ತಲೇ ಬಂದಿದ್ದಾರೆ. ಮತ್ತೊಂದ್ಕಡೆ ಡಿಕೆಶಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗ್ತಿದೆ. ಇದೀಗ ಡಿಕೆಶಿ ಸಿಎಂ ಆದ್ರೆ ಕಾಂಗ್ರೆಸ್ ಕಚೇರಿಗೆ ಬೀಗ ಬೀಳುತ್ತೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಇದನ್ನೂ ಓದಿ: ಅತ್ತರೆ ಸಮಾಧಾನ ಮಾಡಲ್ಲ, ಜೊತೆಯಲ್ಲಿ ಇರಲ್ಲ – ಸೂರಜ್ ಜೊತೆ ಟೂ ಬಿಟ್ಟ ರಾಶಿಕಾ
ಸಿಎಂ ಬದಲಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ. ಎನ್ ರಾಜಣ್ಣ, ಡಿಕೆಶಿ ಅವರ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗಲಿ, ನನ್ನ ತಕರಾರು ಏನೂ ಇಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಆದರೆ, ಒಂದು ಮಾತಂತೂ ಸತ್ಯ, ಡಿಕೆಶಿ ಸಿಎಂ ಆದರೆ, ರಾಜ್ಯದ ಕಾಂಗ್ರೆಸ್ ಕಚೇರಿಗಳಿಗೆ ದೊಡ್ಡ ಬೀಗ ಹಾಕಬೇಕಾಗುತ್ತೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಹಿಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ. ಹಾಗೆಂದು ಮುಂದೆ ಸ್ಪರ್ಧಿಸುವುದಿಲ್ಲ ಎಂಬುದು ಯಾವ ಗ್ಯಾರಂಟಿ. ಹಾಗೆಯೇ ಸಿದ್ದರಾಮಯ್ಯ ಅವರಿಗೂ ಒತ್ತಡ ಇದೆ. ನ.14ರವರೆಗೂ ಏನೂ ನಡೆಯುವುದಿಲ್ಲ. ಯಾವುದೇ ಬದಲಾವಣೆ ನಡೆಯುವುದಿದ್ದರೂ, ಅದು ಬಿಹಾರ ಚುನಾವಣೆ ಬಳಿಕವೇ ನಡೆಯುತ್ತೆ. ಸಿಎಂ ಯಾರು ಆಗಬೇಕು ಎನ್ನುವುದು ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಷಯ. ಆದರೆ, ಸಿದ್ದರಾಮಯ್ಯನವರೇ 5 ವರ್ಷವೂ ಮುಖ್ಯಮಂತ್ರಿ ಆಗಿರಬೇಕು ಎಂಬುದು ನನ್ನ ಆಸೆ ಎಂದಿದ್ದಾರೆ.
ಇದೇ ವೇಳೆ, ದಲಿತ ಸಿಎಂ ಕುರಿತು ಮಾತನಾಡಿ, ದಲಿತರು ಮುಖ್ಯಮಂತ್ರಿ ಆಗಿಲ್ಲ ಎನ್ನುವ ಕೂಗು ಮೊದಲಿನಿಂದಲೂ ಇದೆ. ಕಾಂಗ್ರೆಸ್ ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಹಾಗೆಂದು ಸಚಿವರಾದ ಕೆ.ಎಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಲಾಗಲ್ಲ ಎಂದರು.

ನೋಡಿರಿ

