ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ನಿರ್ಧಾರ – ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

ಜನರ ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿಲ್ಲ. ಬಿಹಾರ ಎಲೆಕ್ಷನ್ ತರ ರಾಜ್ಯದಲ್ಲಿ ಸಂಪುಟ ಪುನರ್ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಎಂ ಬದಲಾವಣೆ ಬಗ್ಗೆ ಹರಡಿರುವ ವದಂತಿಯನ್ನು ತಳ್ಳಿ ಹಾಕಿದರು.
ಬಿಹಾರದಲ್ಲಿ ಅಧಿಕಾರ ವಿರೋಧಿ ಅಲೆ ಮತ್ತು ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ ಎಂದರು.
ಇದನ್ನೂ ಓದಿ: 21 ಕೋಟಿ ರೂ. ಮೌಲ್ಯದ ಕೋಣ ಸಾ*ವು – ವಿಷ ಹಾಕಿ ಕೊಂದ್ರಾ?
ಇನ್ನೂ ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆʼʼ ಎಂದು ತಿಳಿಸಿದರು. ಬಿಹಾರ ಚುನಾವಣೆ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತ ನೀಡಲು ಕೇಳುತ್ತೇನೆ ಅಂತ ಸಿಎಂ ಹೇಳಿದ್ರು.

ನೋಡಿರಿ

