ಬೆಂಗಳೂರು ಜನರಿಗೆ ಸೂಪರ್ ನ್ಯೂಸ್ – 2026 ರ ಮೇ ನಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಕಾರ್ಯಾರಂಭ

ನಮ್ಮ ಮೆಟ್ರೋ ಪಿಂಕ್ ಲೈನ್ ಯಾವಾಗ ಕಾರ್ಯಾರಂಭ ಮಾಡಲಿದೆ ಎಂಬ ಮಾಹಿತಿಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ನೀಡಿದ್ದಾರೆ. 2026ರ ಮೇನಲ್ಲಿ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದ್ದಾರೆ. ‘ಎಕ್ಸ್’ನಲ್ಲಿ ಅವರು ಮಾಡಿರುವ ಪೋಸ್ಟ್ನಲ್ಲಿ, ʼಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ ಮೇ ತಿಂಗಳಲ್ಲಿ ಆರಂಭವಾಗಲಿದೆ. ಈ ಮಾರ್ಗವು 13.76 ಕಿ.ಮೀ. ಭೂಗತ ಮಾರ್ಗವನ್ನು ಹೊಂದಿದ್ದು, ಸಂಚಾರ ಸುಗಮವಾಗಲಿದೆ’ ಎಂದಿದ್ದಾರೆ. ಇದು ಟ್ರಾಫಿಕ್ ಉಲ್ಬಣದಿಂದ ತತ್ತರಿಸುತ್ತಿರುವ ರಾಜಧಾನಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿಯಾಗಿದೆ.

ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ 13.76 ಕಿಮೀ ಉದ್ದದ ಮಾರ್ಗವು ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ ಮತ್ತು ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗದಲ್ಲಿ 13.76 ಕಿಮೀ ಉದ್ದದ ಭೂಗತ ಮಾರ್ಗವಿದೆ. ಬೆಂಗಳೂರಿನಾದ್ಯಂತ ಸಂಚಾರವನ್ನು ಸುಗಮಗೊಳಿಸುತ್ತದೆ. ಜತೆಗೆ ನಗರದ ಉತ್ತರ – ದಕ್ಷಿಣ ಸಂಪರ್ಕವನ್ನು ಬಲಪಡಿಸುತ್ತದೆ” ಎಂದು ಡಿಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.
ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ. ಇದು ಅತಿ ಉದ್ದದ ಭೂಗತ ಮಾರ್ಗ. ಈ ಸುರಂಗದಲ್ಲಿ 12 ನಿಲ್ದಾಣಗಳು ಇವೆ. ಇನ್ನುಳಿದ ಆರು ನಿಲ್ದಾಣಗಳು ಎತ್ತರಿಸಿದ ಮಾರ್ಗದಲ್ಲಿ ಇವೆ. ನಾಲ್ಕು ಪ್ಯಾಕೇಜ್ಗಳಲ್ಲಿ ಸುರಂಗ ಮಾರ್ಗದ ಕಾಮಗಾರಿ ಶೇಕಡಾ 95ರಷ್ಟು ಪೂರ್ಣಗೊಂಡಿದೆ. ಈ ಕಾಮಗಾರಿ 2020ರ ಆಗಸ್ಟ್ 22ರಂದು ಆರಂಭಗೊಂಡು, 2024ರ ಅಕ್ಟೋಬರ್ 30ರಂದು ಮುಕ್ತಾಯಗೊಂಡಿದೆ. ಭೂಗತ ನಿಲ್ದಾಣಗಳಲ್ಲಿ ಮೆಟ್ಟಿಲು ನಿರ್ಮಾಣ, ಹಳಿ ಜೋಡಣೆ, ವಿದ್ಯುತ್ ಸಂಪರ್ಕ, ಎಲಿವೇಟರ್, ಎಸಿ, ಮತ್ತು ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳ ಅಳವಡಿಕೆ ಕಾರ್ಯ ಭರದಿಂದ ಸಾಗಿದೆ.

ನೋಡಿರಿ

