ಮಹತ್ವದ ಘಟ್ಟ ತಲುಪಿದ ರೇಣುಕಾಸ್ವಾಮಿ ಕೊಲೆ ಕೇಸ್! – ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ!

ಮಹತ್ವದ ಘಟ್ಟ ತಲುಪಿದ ರೇಣುಕಾಸ್ವಾಮಿ ಕೊಲೆ ಕೇಸ್! –  ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟಿ ಪವಿತ್ರಾ ಗೌಡ ಸಂಕಷ್ಟ ತಪ್ಪಿದಂತೆ ಕಾಣುತ್ತಿಲ್ಲ. ನಿನ್ನೆಯಷ್ಟೇ ಸೆಷನ್ಸ್​​ ಕೋರ್ಟ್​​ನಲ್ಲಿ ನಟ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಬೆನ್ನಲ್ಲೇ ಪವಿತ್ರಾ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್‌ನ ಆದೇಶವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಕೋರಿ ಈ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಮಾತ್ರ ಅಧಿಕಾರ! – ಡಿಕೆ ಶಿವಕುಮಾರ್‌ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಗುರೂಜಿ!

ಈ ಹಿಂದೆ ನಟಿ ಪವಿತ್ರಾ ಗೌಡಗೆ ಹೈಕೋರ್ಟ್ ಜಾಮೀನು ನೀಡಿತ್ತು. ಆದ್ರೆ ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಮತ್ತೆ ಎಲ್ಲಾ ಆರೋಪಿಗಳನ್ನು ಜೈಲಿಗೆ ಹಾಕಲಾಗಿತ್ತು. ಇದೀಗ ಈ ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ.

ಈ ಕುರಿತು ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ. ಪವಿತ್ರ ಗೌಡ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್ ಆದೇಶದ ಪುನರ್ ಪರಿಶೀಲನೆ ಕೋರಿದ್ದಾರೆ. ಗುರುವಾರ ನ್ಯಾ. ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಪುನರ್ ಪರಿಶೀಲನಾ ಅರ್ಜಿಯ ಪ್ರತಿಯನ್ನ ರಾಜ್ಯ ಸರ್ಕಾರದ ಪರ ವಕೀಲರಿಗೆ ಇನ್ನೂ ನೀಡಿಲ್ಲ. ಅರ್ಜಿ ಪ್ರತಿ ನೀಡಿದರೆ ಯಾವ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದಾರೆನ್ನುವುದು ತಿಳಿಯಲಿದೆ. ಗುರುವಾರ ಚೇಂಬರ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಬಳಿಕ ಮುಂದಿನ ಪ್ರಕ್ರಿಯೆ ನಡೆಯಬಹುದು ಎಂದು ಹೇಳಿದ್ದಾರೆ.

Shwetha M