ಹಾಂಗ್ ಕಾಂಗ್ ಸಿಕ್ಸಸ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಗೆದ್ದ ಭಾರತ

ಹಾಂಗ್ ಕಾಂಗ್ ಸಿಕ್ಸಸ್ ಪಂದ್ಯಾವಳಿ ಇಂದಿನಿಂದ ಆರಂಭವಾಗಿದೆ. ಈ ಪಂದ್ಯಾವಳಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಅತ್ಯಂತ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಗೆಲುವಿನ ಶುಭಾರಂಭ ಪಡೆದುಕೊಂಡಿದೆ. ವಾಸ್ತವವಾಗಿ ಪಾಕಿಸ್ತಾನ ಪಂದ್ಯವನ್ನು ಗೆಲ್ಲುವ ಅವಕಾಶ ಹೊಂದಿತ್ತು. ಆದರೆ ಮಾಂಗ್ ಕೋಕ್‌ನಲ್ಲಿ ಮಳೆ ಬಂದ ಕಾರಣ ಭಾರತವು ಡಕ್‌ವರ್ತ್-ಲೂಯಿಸ್ ವಿಧಾನದ ಪ್ರಕಾರ 2 ರನ್‌ಗಳಿಂದ ಜಯ ಸಾಧಿಸಿತು.
ಭಾರತ ನೀಡಿದ 87 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ತಂಡವು ಕೇವಲ 3 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 41 ರನ್ ಗಳಿಸಿತು, ಆದರೆ ಈ ಹಂತದಲ್ಲಿ ಭಾರೀ ಮಳೆ ಬಂದ ಕಾರಣ ಆಟವನ್ನು ನಿಲ್ಲಿಸಬೇಕಾಯಿತು. ಮಳೆ ನಿಲ್ಲದ ಕಾರಣ ಪಂದ್ಯವನ್ನು ಪುನರಾರಂಭಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಡಕ್‌ವರ್ತ್-ಲೂಯಿಸ್ ವಿಧಾನವನ್ನು ಬಳಸಿಕೊಂಡು ಫಲಿತಾಂಶವನ್ನು ನಿರ್ಧರಿಸಲಾಯಿತು. ಈ ವಿಧಾನದ ಪ್ರಕಾರ, ಪಾಕಿಸ್ತಾನವು ಭಾರತಕ್ಕಿಂತ 2 ರನ್‌ಗಳ ಹಿಂದಿದ್ದ ಕಾರಣ ಪಂದ್ಯವನ್ನು ಕಳೆದುಕೊಂಡಿತು.
ಇದನ್ನೂ ಓದಿ: ನಾಗರಹೊಳೆ ಹಾಗೂ ಬಂಡಿಪುರ ಸಫಾರಿ ಕ್ಲೋಸ್ – ಅರಣ್ಯ ಸಚಿವ ಖಂಡ್ರೆ ಆದೇಶ
ಟಾಸ್ ಸೋತ ಭಾರತದ ನಾಯಕ ದಿನೇಶ್ ಕಾರ್ತಿಕ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ ಆರು ಓವರ್‌ಗಳಲ್ಲಿ ಕೇವಲ 86 ರನ್ ಗಳಿಸಿತು. ಭಾರತದ ಪರ ರಾಬಿನ್ ಉತ್ತಪ್ಪ 11 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಎರಡು ಬೌಂಡರಿಗಳೊಂದಿಗೆ 28 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಭರತ್ ಚಿಪ್ಲಿ 13 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎರಡು ಬೌಂಡರಿಗಳೊಂದಿಗೆ 24 ರನ್ ಗಳಿಸಿದರು. ದಿನೇಶ್ ಕಾರ್ತಿಕ್ ಕೂಡ ಆರು ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎರಡು ಬೌಂಡರಿಗಳೊಂದಿಗೆ ಅಜೇಯ 17 ರನ್ ಬಾರಿಸಿದರು.

ನೋಡಿರಿ

