ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ! – ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‌ನಲ್ಲಿ ಆರೋಪಿಗಳಿಗೆ ಸದ್ಯಕ್ಕಂತೂ ರಿಲೀಫ್ ಸಿಗೋತರ ಕಾಣಿಸುತ್ತಿಲ್ಲ. ಎಲ್ಲಾ ಆರೋಪಿಗಳು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇದೀಗ ಈ ಪ್ರಕರಣದ A1 ಆರೋಪಿ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆಯಾಗಿದೆ. ಪವಿತ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಡೆಡ್‌ಲೈನ್ ಮತ್ತೆ ಮುಂದೂಡಿಕೆ! – ಸಿಎಂ ಮಾತಿಗೂ ಬೆಲೆ ಇಲ್ವಾ?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆಗಸ್ಟ್ 14 ರಂದು ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಇದ್ರಿಂದಾಗಿ ಮತ್ತೆ ಎಲ್ಲಾ ಆರೋಪಿಗಳು ಜೈಲು ಸೇರುವಂತೆ ಆಗಿತ್ತು. ಈ ಬೆನಲ್ಲೇ ಪವಿತ್ರ ಗೌಡ ಅರ್ಜಿ ಪರಿಶೀಲನೆ ಮಾಡಿ ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕೂ ಮೊದಲು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಜಾಮೀನು ರದ್ದು ಆದೇಶದಲ್ಲಿ ಕೆಲ ತಪ್ಪುಗಳಿವೆ. ಮತ್ತೊಮ್ಮೆ ಪರಿಶೀಲಿಸಿ ಜಾಮೀನು ನೀಡುವಂತೆ ಪವಿತ್ರಾಗೌಡ ಮನವಿ ಮಾಡಿದ್ದರು. ಆರೋಪಿಗಳ ವಿಚಾರಣೆಯನ್ನು ನ್ಯಾಯಾಲಯವು ನಡೆಸಿದ್ದು, ನ.10ರಂದು ಟ್ರಯಲ್ ಆರಂಭದ ದಿನಾಂಕ ನಿಗದಿಪಡಿಸಲಾಗಿದೆ. ಪ್ರಾಸಿಕ್ಯೂಷನ್ ಶೀಘ್ರದಲ್ಲೇ ಸಾಕ್ಷ್ಯಗಳ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಲು ತಯಾರಿ ನಡೆಸುತ್ತಿದೆ. ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 230 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಈ ಪೈಕಿ ಸುಮಾರು 70 ಅತ್ಯಂತ ಪ್ರಮುಖವಾಗಿವೆ. ಮೂರು ಪ್ರಮುಖ ಐ ವಿಟ್ನೆಸ್‌ಗಳು, ಸಿಸಿಟಿವಿ ದೃಶ್ಯಗಳು ಹಾಗೂ ಎಫ್‌ಎಸ್‌ಎಲ್ ವರದಿ ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳೂ ಸೇರಿವೆ.
ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾಗೌಡ, ದರ್ಶನ್, ನಾಗರಾಜ್, ಲಕ್ಷ್ಮಣ್, ಜಗದೀಶ್ ಹಾಗೂ ಮಧ್ಯಂತರ ಜಾಮೀನಿನ ಮೇರೆಗೆ ಹೊರಗಿರುವ ಪ್ರದೋಷ್ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು ಆರೋಪಪಟ್ಟಿಯಲ್ಲಿರುವ ಅಂಶಗಳನ್ನು ಓದಿ ಹೇಳಿದ್ದರು. ಬಳಿಕ ಎಲ್ಲ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನ ನಿರಾಕರಿಸಿದ್ದರು. ಹೀಗಾಗಿ ನ.10ರಂದು ಪ್ರಕರಣದ ಟ್ರಯಲ್ ದಿನಾಂಕವನ್ನ ನಿಗದಿಪಡಿಸುವುದಾಗಿ ಹೇಳಿ ವಿಚಾರಣೆ ಮುಂದೂಡಿದ್ದರು.

ನೋಡಿರಿ

