ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರದತ್ತ ಬೆರಳು ತೋರಿಸಿದ ರಾಜ್ಯ ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಚಾಟಿ

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ರಾಜ್ಯ ಸರ್ಕಾರವನ್ನು ಸಂಕಷ್ಟಕ್ಕೆ ದೂಡಿದೆ. ಇದೀಗ ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮʼವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಖಡಕ್ ಆಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರವಾಗಿ ಪತ್ರ ಬರೆದು ಆಕ್ಷೇಪಿಸಿದ್ದಾರೆ.

ರಾಜ್ಯದ ವಿವಿಧೆಡೆ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮುಖ್ಯಮಂತ್ರಿಗಳು ಕೇಂದ್ರದತ್ತ ಬೆರಳು ತೋರಿ ಕಬ್ಬು ಬೆಳೆಗಾರರ ಹಿತರಕ್ಷಣೆಯಿಂದ ನುಣುಚಿಕೊಳ್ಳುವುದು ತರವಲ್ಲ. ಪ್ರಧಾನಿ ಮೋದಿ ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದ್ದು, ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಹಿತರಕ್ಷಣೆಗೆ ಹಿಂದೆಂದಿಗಿಂತಲೂ ಒಳ್ಳೇ ಕ್ರಮಗಳನ್ನೇ ಕೈಗೊಂಡಿದೆ ಎಂದು ವಿಸ್ತ್ರತವಾಗಿಯೇ ವಿವರಣೆ ನೀಡಿ ಸಿಎಂಗೆ ಚಾಟಿ ಬೀಸಿದ್ದಾರೆ.
ಇದನ್ನೂ ಓದಿ: ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಮೋದಿಯಿಂದ ಹಸಿರು ನಿಶಾನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಳೆಗಾರರ ಸಂಕಷ್ಟ ಪರಿಸ್ಥಿತಿ ಅರಿತು ಇದನ್ನು ನಿವಾರಿಸಿದೆ. ಈಗ ಕಬ್ಬು ಬಾಕಿಯನ್ನು ಶೂನ್ಯಕ್ಕೆ ತಂದಿದೆ. 2022-23 ಮತ್ತು 2023-24ರ ಸಕ್ಕರೆ ಹಂಗಾಮಿಗೆ ಕೇಂದ್ರ ಸರ್ಕಾರದಿಂದ ಕಬ್ಬಿನ ಬಾಕಿ ಶೂನ್ಯವಾಗಿದೆ. 2024-25ಕ್ಕೆ ಸುಮಾರು ₹50 ಲಕ್ಷ ಬಾಕಿ ಇದೆಯಷ್ಟೇ. ವಾಸ್ತವ ಹೀಗಿರುವಾಗ ತಾವು ಕೇಂದ್ರದತ್ತ ಬೆರಳು ತೋರುವುದು ಅನ್ಯಾಯದ ಪ್ರತೀಕ ಮತ್ತು ರೈತರನ್ನು ದಿಕ್ಕು ತಪ್ಪಿಸುವ ಕ್ರಮವಾಗಿದೆ ಎಂದು ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ.
16500 ಕೋಟಿ ರೂ. ಆರ್ಥಿಕ ನೆರವು:
ಕಬ್ಬು ಬೆಳೆಗಾರರಿಗೆ ಸಕಾಲಿಕ ಪಾವತಿಗೆ ಅನುಕೂಲವಾಗಲೆಂದೇ ಕೇಂದ್ರ ಸರ್ಕಾರ ವಿವಿಧ ರೀತಿಯಲ್ಲಿ ನೆರವಾಗಿದೆ. 2014-15ರಿಂದ 2020-21ರ ಅವಧಿಯಲ್ಲಿ ವಿವಿಧ ಯೋಜನೆಗಳಡಿ ರೈತರ ಕಬ್ಬಿನ ಬಾಕಿ ಪಾವತಿಸಲು ಅನುವಾಗುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸುಮಾರು ₹16,500 ಕೋಟಿ ಆರ್ಥಿಕ ನೆರವನ್ನು ಒದಗಿಸಿದೆ ಎಂದು ಗಮನ ಸೆಳೆದಿದ್ದಾರೆ.

ನೋಡಿರಿ

