ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಮೃತವರ್ಷಿಣಿ ಖ್ಯಾತಿಯ ರಜಿನಿ – ರೀಲ್ಸ್ ಗೆಳೆಯನ ಜೊತೆ ಮದುವೆ

ಅಮೃತವರ್ಷಿಣಿ ಧಾರಾವಾಹಿ ಮೂಲಕ ಖ್ಯಾತಿ ಪಡೆದಿದ್ದ ರಜಿನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಷ್ಟು ದಿನಗಳವರೆಗೆ ಬರೀ ಗೆಳೆಯ ನೀನು ಎಂದು ಹೇಳುತ್ತಿದ್ದ ಜಿಮ್ ಟ್ರೈನರ್ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ.
ಇದನ್ನೂ ಓದಿ: ನಾನು ವಿಜಯ್ ದೇವರಕೊಂಡರನ್ನ ಮದುವೆ ಆಗುತ್ತೇನೆ.. ಕಡೆಗೂ ಗಾಸಿಪ್ಗೆ ಬ್ರೇಕ್ ಹಾಕಿದ ರಶ್ಮಿಕಾ ಮಂದಣ್ಣ
ಕಿರುತೆರೆ ನಟಿ ರಜಿನಿ ಮದುವೆಯಾಗಿದ್ದಾರೆ. ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಜೊತೆ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಅಮೃತವರ್ಷಿಣಿ ಧಾರಾವಾಹಿ ಮೂಲಕ ಖ್ಯಾತಿ ಪಡೆದಿದ್ದ ರಜಿನಿ, ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಅವರು ವೈಯಕ್ತಿಕ ಕಾರಣದಿಂದ ಹೆಚ್ಚು ಸದ್ದು ಮಾಡುತ್ತಿದ್ದರು. ಜಿಮ್ ಟ್ರೇನರ್ ಅರುಣ್ ವೆಂಕಟೇಶ್ ಜೊತೆ ರೀಲ್ಸ್ ಮಾಡುತ್ತಿದ್ದರು. ಜೊತೆಗೆ ‘ನಾವಿಬ್ಬರೂ ಫ್ರೆಂಡ್ಸ್ ಅಷ್ಟೇ’ ಎಂದು ಕೆಲ ತಿಂಗಳ ಹಿಂದೆ ರಜಿನಿ ಅವರು ಸ್ಪಷ್ಟನೆ ನೀಡಿದ್ದರು. ರಜಿನಿ ಅವರು ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಬಳಿಕ ಅವರು ಶೋಗಳಲ್ಲೂ ಕಾಣಿಸಿಕೊಂಡಿದ್ದರು. ಕೆಲವು ಶೋಗಳನ್ನು ಅವರು ಹೋಸ್ಟ್ ಮಾಡಿದ್ದಾರೆ.
(ನವೆಂಬರ್ 10 ರಂದು ರಜಿನಿ ಹಾಗೂ ಅರುಣ್ ವಿವಾಹ ನೆರವೇರಿದೆ. ಕೇವಲ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಈ ಮದುವೆ ಶಾಸ್ತ್ರ ನಡೆದಿದೆ.

ನೋಡಿರಿ

