ಪರಪ್ಪನ ಅಗ್ರಹಾರದ ವಿಡಿಯೋ ವೈರಲ್ ಕೇಸ್! – ಅಧಿಕಾರಿಗಳಿಗೆ ಶಾಕ್ ಕೊಟ್ಟ ಗೃಹಸ ಸಚಿವ ಪರಮೇಶ್ವರ್

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಕ್ರಮ ಕೈಕೊಂಡಿದೆ. ಈ ಘಟನೆ ಬೆನ್ನಲ್ಲೇ ಸಭೆ ನಡೆಸಿದ ಗೃಹಸ ಸಚಿವ ಪರಮೇಶ್ವರ್ ಅಧಿಕಾರಿಗಳಿಗೆ ಕೊಕ್ ನೀಡಿದ್ದಾರೆ.
ಇದನ್ನೂ ಓದಿ: ಗಿಫ್ಟ್ ಸಿಕ್ಕ ಬೈಕ್ಗೆ ನಡುರಸ್ತೆಯಲ್ಲೇ ಬೆಂಕಿ ಇಟ್ಟ ಯುವಕ! – ಅರೆಸ್ಟ್ ಆಗ್ತಿದ್ದಂತೆ ಬಯಲಾಯ್ತು ಶಾಕಿಂಗ್ ವಿಚಾರ!
ಐಸಿಸ್ ಉಗ್ರ, ವಿಕೃತ ಕಾಮಿ ಉಮೇಶ್ ರೆಡ್ಡಿ, ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಆರೋಪಿ ತರುಣ್ ರಾಜ್ ಸೇರಿದಂತೆ ಕೆಲ ಅಪರಾಧಿಗಳು ಜೈಲಿನೊಳಗೆ ಮೊಬೈಲ್ ಬಳಸಿ, ಟಿವಿ ನೋಡಿ, ಮದ್ಯಸೇವಿಸಿ ಡ್ಯಾನ್ಸ್ ಮಾಡುತ್ತಿರುವ ದೃಶ್ಯಗಳು ವೈರಲ್ ಆಗ್ತಿವೆ. ಈ ಘಟನೆ ಬೆನ್ನಲ್ಲೇ ಸಭೆ ನಡೆಸಿದ ಗೃಹಸ ಸಚಿವ ಪರಮೇಶ್ವರ್ ಅಧಿಕಾರಿಗಳಿಗೆ ಕೊಕ್ ನೀಡಿದ್ದಾರೆ.
ಜೈಲು ವ್ಯವಸ್ಥೆಯ ಇಂದು ಗೃಹ ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇದಾದ ಬಳಿಕ ಸೂಪರಿಂಟೆಂಡೆಂಟ್ ಮತ್ತು ಇತರ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋಗಳು ಹೊರಬಂದ ನಂತರ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಹುಟ್ಟಿದೆ. ಜೈಲುಗಳು ಶಿಕ್ಷೆಯ ಸ್ಥಳವಲ್ಲ, ಅಪರಾಧಿಗಳಿಗೆ ಐಷಾರಾಮಿ ಜೀವನ ನಡೆಸುವ ಸ್ಥಳವಲ್ಲ ಎಂದು ಜನರು ಖಂಡಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರು ಇತ್ತೀಚೆಗೆ ಹಿರಿಯ ಜೈಲು ಅಧಿಕಾರಿಗಳ ಸಭೆ ಕರೆದು ತೀವ್ರ ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ವೈರಲ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಿ, ಅಧಿಕಾರಿಗಳಿಂದ ವಿವರಣೆ ಕೇಳಿದರು. ಈ ರೀತಿಯ ಅಕ್ರಮಗಳಿಗೆ ನಿರ್ಲಕ್ಷ್ಯ ಮಾಡಬಾರದು. ಜೈಲುಗಳು ದೇಶದ ಭದ್ರತೆಗೆ ಧಕ್ಕೆ ತರುವ ಸ್ಥಳವಾಗಬಾರದು ಎಂದು ಹೇಳಿದ್ದಾರೆ. ಅಲ್ಲದೇ ಇಬ್ಬರು ಅಧಿಕಾರಿಗಳು ಅಮಾನತು ಹಾಗೂ ಮತ್ತೊಬ್ಬ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ.
ಜೈಲು ಸೂಪರಿಂಟೆಂಡೆಂಟ್ ಮ್ಯಾಗೇರಿ ಮತ್ತು ಸಹಾಯಕ ಸೂಪರಿಂಟೆಂಡೆಂಟ್ ಅಶೋಕ್ ಭಜಂತ್ರಿ ಅವರನ್ನು ಅಮಾನತ್ತು ಮಾಡಲಾಗಿದೆ. ಜೊತೆಗೆ ಚೀಪ್ ಸೂಪರಿಂಟೆಂಡೆಂಟ್ ಸುರೇಶ್ ವರ್ಗಾವಣೆ ಮಾಡಲಾಗಿದೆ. ತಕ್ಷಣವೇ ಟ್ರಾನ್ಸ್ಫರ್ ಮಾಡುವಂತೆ ಆದೇಶ ನೀಡಿದ್ದಾರೆ.

ನೋಡಿರಿ

