ಕಬ್ಬು ಬೆಳೆಗಾರರ ಕಿಚ್ಚಿಗೆ ಟ್ರ್ಯಾಕ್ಟರ್ಗಳು ಸುಟ್ಟು ಭಸ್ಮ! – ಮೂರು ತಾಲೂಕಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಿದ್ದು ಹಿಂಸಾಚಾರಕ್ಕೆ ತಿರುಗಿದೆ. ಗುರುವಾರ ಪ್ರತಿಭಟನಾಕಾರರು 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವೃಕ್ಷಮಾತೆ ಸಾಲು ಮಾರದ ತಿಮ್ಮಕ್ಕ ಇನ್ನಿಲ್ಲ – ವಯೋಸಹಜ ಕಾಯಿಲೆಯಿಂದ ವಿಧಿವಶ
ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ತಿದ್ದಂತೆ, ರಾಜ್ಯ ಸರ್ಕಾರ ಕಬ್ಬಿಗೆ 3300 ರೂಪಾಯಿ ಬೆಲೆ ನಿಗದಿಪಡಿಸಿತ್ತು. ಸರ್ಕಾರ ನಿಗದಿ ಪಡಿಸಿದ 3300 ರೂಪಾಯಿಗೆ ವಿರೋಧ ವ್ಯಕ್ತಪಡಿಸಿದ್ದ ಮುಧೋಳ ರೈತರು ಪ್ರತಿಭಟನೆ ಮುಂದುವರಿಸಿದ್ದರು. ಗುರುವಾರ ಮುಧೋಳ ಪಟ್ಟಣವನ್ನ ಬಂದ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಮಾಲೀಕರೇ ಮಾತುಕತೆ ಬರಬೇಕು ಎಂದು ಪಟ್ಟುಹಿಡಿದಿದ್ದರು. ಪ್ರತಿ ಟನ್ ಕಬ್ಬಿಗೆ 3 ಸಾವಿರದ 500 ರೂಪಾಯಿ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು. ಆದರೆ ಮಾಲೀಕರು ಮಾತುಕತೆಗೆ ಬಂದಿಲ್ಲ ಎಂದು ಆಕ್ರೋಶ ಹೊರಹಾಕಿದ ರೈತರು ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನ ಕಂಡು ಅದನ್ನ ನೆಲಕ್ಕುರುಳಿಸಿ ಬೆಂಕಿ ಹಚ್ಚಿದ್ದಾರೆ.
ರೈತರ ಹೋರಾಟ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕಿನಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮುಧೋಳ, ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ನವೆಂಬರ್ 13 ರಾತ್ರಿ 8 ಗಂಟೆಯಿಂದ ನವೆಂಬರ್ 16 ರಾತ್ರಿ ಯವರೆಗೆ ಆದೇಶ ಜಾರಿಯಲ್ಲಿರಲಿದೆ. ಈ ವೇಳೆ ಪ್ರತಿಭಟನೆ ಮಾಡುವಂತಿಲ್ಲ, ಗುಂಪು ಸೇರುವಂತಿಲ್ಲ ಎಂದು ಆದೇಶಿಸಿದ್ದಾರೆ.
ಇನ್ನು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಹಿತೇಂದ್ರ ಆರ್. ಪ್ರತಿಕ್ರಿಯೆ ನೀಡಿದ್ದಾರೆ. ಕಬ್ಬಿನ ಬೆಲೆ ನಿಗದಿ ಮತ್ತು ಹಳೆ ಬಾಕಿ ಪಾವತಿಗಾಗಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿಗೆ ಐದು ಬೈಕ್ಗಳು ಸುಟ್ಟು ಕರಕಲಾಗಿದ್ದು, ಅವು ರೈತರು ಹಾಗೂ ಕಾರ್ಮಿಕರಿಗೆ ಸೇರಿದ್ದಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದು, ಪೆಟ್ರೋಲ್ ಕ್ಯಾನ್ಗಳನ್ನು ತರಲಾಗಿತ್ತು. ನಿಜವಾದ ರೈತರು ಈ ಕೃತ್ಯ ಎಸಗಿಲ್ಲ. ಬದಲಾಗಿ, ರೈತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನೋಡಿರಿ

