ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭಕ್ಕೆ ಕ್ಷಣಗಣನೆ – ಇಂದಿನಿಂದ 5 ದಿನಗಳ ಕಾಲ ನಡೆಯಲಿದೆ ಕಡಲೆಕಾಯಿ ಹಬ್ಬ

ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭಕ್ಕೆ ಕ್ಷಣಗಣನೆ – ಇಂದಿನಿಂದ 5 ದಿನಗಳ ಕಾಲ ನಡೆಯಲಿದೆ ಕಡಲೆಕಾಯಿ ಹಬ್ಬ

ಬೆಂಗಳೂರಿನ ಐತಿಹಾಸಿಕ ಹಬ್ಬ ಕಡಲೆಕಾಯಿ ಪರಿಷೆ ಕೌಂಡ್‌ಡೌನ್‌ ಶುರುವಾಗಿದೆ. ಇಂದಿನಿಂದ ಐದು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದ್ದು, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ಈ ರೋಡ್‌ಗೆ ನಾನೇ ಡಾನ್!‌ – ಕಾರಿನ ಮೇಲೆ ಗೂಳಿಯಿಂದ ಡೆಡ್ಲಿ ಅಟ್ಯಾಕ್!

ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ರಾಜಧಾನಿ ಬೆಂಗಳೂರಿನ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ಆಚರಿಸಲಾಗುತ್ತಿದೆ. ಕಾರ್ತಿಕ ಮಾಸದ ಕೊನೆಯ ದಿನವಾದ ಇಂದು‌ ಬಸವನಗುಡಿ ಕಡ್ಲೆಕಾಯಿ ಪರಿಷೆ ಆರಂಭವಾಗಲಿದ್ದು, 21 ರವರೆಗೆ ನಡೆಯಲಿದೆ. ಬೆಳಗ್ಗೆ ‌10:30 ಕ್ಕೆ ದೊಡ್ಡ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಹಾಗೂ ಐದು ಎತ್ತುಗಳಿಗೆ ಕಡಲೆಕಾಯಿ ಗಿಡ ತಿನ್ನಿಸುವ ಮೂಲಕ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸ್ಥಳೀಯ ಶಾಸಕರು ಪರಿಷೆಯನ್ನು ಉದ್ಘಾಟಿಸಲಿದ್ದಾರೆ.

ಈ ಬಾರಿ ಶುಲ್ಕ ರಹಿತವಾಗಿ ಅಂಗಡಿಗಳನ್ನು ತೆರೆಯಲು ಅವಕಾಶವಿದ್ದು, ಸಾವಿರಾರು ಅಂಗಡಿಗಳನ್ನು ಈಗಾಗಲೇ ಹಾಕಲಾಗಿದೆ. ಜೊತೆಗೆ ಈ ಬಾರಿ ಪ್ಲಾಸ್ಟಿಕ್ ಮುಕ್ತವಾದ ಪರಿಷೆಯಾಗಿದ್ದು, ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡಿದರೆ ಎತ್ತಡಂಗಿ ಮಾಡುವ ಎಚ್ವರಿಕೆ ನೀಡಲಾಗಿದೆ. ಈ ಬಾರಿ ಹಾಸನಾಂಬೆಯಂತೆ ದೊಡ್ಡ ಬಸವಣ್ಣಗೆ ಹೂವಿನ ಅಲಂಕಾರ ಮಾಡಲಾಗಿದೆ. ಜೊತೆಗೆ ಮೈಸೂರು ದಸರಾದಂತೆ ಬಸವನಗುಡಿ ಸುತ್ತಮುತ್ತಲಿನ 9 ರಸ್ತೆಗಳಿಗೆ ದೀಪಾಂಲಕಾರ‌ ಮಾಡಲಾಗಿದೆ. ಲಕ್ಷಾಂತರ ಜನ ಸೇರುವ ನಿರೀಕ್ಷೆಯಿಂದ 900 ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಳೆದ ವರ್ಷ 5 ಲಕ್ಷಕ್ಕೂ ಅಧಿಕ ಜನರು ಪರಿಷೆಯಲ್ಲಿ ಸೇರಿದ್ದರು. ಈ ವರ್ಷವೂ ಐದು ಲಕ್ಷಕ್ಕಿಂತ ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ.

Shwetha M