ಪ್ರತಿಭಟನೆ ವೇಳೆ ಕಬ್ಬಿನ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಪ್ರಕರಣ – 10 ರೈತರು ವಶಕ್ಕೆ

ಪ್ರತಿಭಟನೆ ವೇಳೆ ಕಬ್ಬಿನ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಪ್ರಕರಣ – 10 ರೈತರು ವಶಕ್ಕೆ

ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಬಾಗಲಕೋಟೆಯಲ್ಲಿ ನಡೆದ ಪ್ರತಿಭಟನೆ ಈ ವೇಳೆ ಕಬ್ಬು ತುಂಬಿದ್ದ ಟ್ರ‍್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಇದೀಗ ಈ ಕೇಸ್‌ಗೆ ಸಂಬಂಧಿಸಿದಂತೆ 10 ಜನ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭಕ್ಕೆ ಕ್ಷಣಗಣನೆ – ಇಂದಿನಿಂದ 5 ದಿನಗಳ ಕಾಲ ನಡೆಯಲಿದೆ ಕಡಲೆಕಾಯಿ ಹಬ್ಬ 

ಕಬ್ಬಿಗೆ ಯೋಗ್ಯ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.ಜಿಲ್ಲೆಯ ರಬಕವಿ ಬನಹಟ್ಟಿಯ ಸಮೀರವಾಡಿ ಬಳಿಯಿರುವ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಪ್ರತಿಭಟನೆ ವೇಳೆ  ಪ್ರತಿಭಟನಾಕಾರರು ಕಾರ್ಖಾನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ಈ ಸಂದರ್ಭದಲ್ಲಿ ಕಾರ್ಖಾನೆ ಆವರಣದಲ್ಲಿ ನಿಂತಿದ್ದ ಕಬ್ಬು ತುಂಬಿದ 100 ಕ್ಕೂ ಹೆಚ್ಚು ಟ್ರ‍್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಜನ ರೈತರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಸಿದ್ದಪ್ಪ ಬಳಗಾನೂರ, ಮಲ್ಲು ಮೆಟಗುಡ್ಡ, ರಾಜುಗೌಡ ಪಾಟೀಲ್, ಬಸು ನಾಯ್ಕರ್ ಸೇರಿದಂತೆ ಒಟ್ಟು 10 ಮಂದಿಯನ್ನು ಮಹಾಲಿಂಗಪುರ ಠಾಣೆಯ ಪೊಲೀಸರು ವಿಚಾರಣೆಗೆ ಕರೆದಿದ್ದು, ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ. ರೈತರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ರೈತ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Shwetha M