ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು – ಹೊಸದಾಗಿ ಪ್ರಕರಣ ಪರಿಗಣಿಸಲು ಹೈಕೋರ್ಟ್ ಆದೇಶ

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ನೀಡಿದೆ. ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಇದನ್ನೂ ಓದಿ: ರೂಲ್ಸ್ ಬ್ರೇಕ್ ಮಾಡಿದ ಅಶ್ವಿನಿಗೆ ಬಿಗ್‌ಬಾಸ್ ಶಿಕ್ಷೆ! – ಕಾಲು ಮೇಲೆ ಕಾಲು ಹಾಕಿ ಕುಳಿತ ಗಿಲ್ಲಿ ನಟ!
ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿತ್ತು. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದೀಗ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.

ನೋಡಿರಿ

