ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್‌ಸಿಗ್ನಲ್! – ಸಿಎಂ ಸಿದ್ದರಾಮಯ್ಯ ಭೇಟಿಯಾದ ಶಾಸಕರು

ಸಂಪುಟ ಸರ್ಜರಿಗೆ ರಾಹುಲ್ ಗಾಂಧಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಇದಕ್ಕೂ ಮುನ್ನವೇ ಹಲವು ಶಾಸಕರು ಸಿಎಂ ಸಿದ್ಧರಾಮಯ್ಯ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು – ಹೊಸದಾಗಿ ಪ್ರಕರಣ ಪರಿಗಣಿಸಲು ಹೈಕೋರ್ಟ್ ಆದೇಶ
ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ಸರ್ಜರಿ ಕುತೂಹಲ ಮೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಮಾಲೋಚಿಸಲಿದ್ದಾರೆ. ಇದೀಗ ಕಾವೇರಿ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯರನ್ನು ಮಾತನಾಡಿಸಿದ ಹಲವು ಶಾಸಕರು ಸಚಿವ ಸ್ಥಾನಕ್ಕೆ ಟವಲ್ ಹಾಕಿದ್ದಾರೆ. ಶಾಸಕರಾದ ನರೇಂದ್ರಸ್ವಾಮಿ, ಬಿ.ಆರ್.ಪಾಟೀಲ್, ವಿಜಯಾನಂದ ಕಾಶಪ್ಪನವರ್, ಅಶೋಕ್ ಪಟ್ಟಣ, ಪೊನ್ನಣ್ಣ, ಪ್ರದೀಪ್ ಈಶ್ವರ್, ಮಾಜಿ ಸಚಿವರಾದ ಕೆ.ಎನ್. ರಾಜಣ್ಣ ಸೇರಿ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆ ಪೈಕಿ ಸಿಎಂ ಮತ್ತು ಕೆ.ಎನ್.ರಾಜಣ್ಣ ನಡುವೆ ಸುಮಾರು 20 ನಿಮಿಷ ಪ್ರತ್ಯೇಕ ಮಾತುಕತೆ ನಡೆದಿದೆ. ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಮುನ್ನ K.N.ರಾಜಣ್ಣ ಚರ್ಚೆ ನಡೆಸಿರೋದು ಭಾರಿ ಕುತೂಹಲ ಮೂಡಿಸಿದೆ. ಮಂತ್ರಿ ಸ್ಥಾನದ ವಿಚಾರವಾಗಿ ಸಿದ್ದರಾಮಯ್ಯ ಜೊತೆ ರಾಜಣ್ಣ ಚರ್ಚೆ ನಡೆಸಿದ್ದಾರೆ. ಮಂತ್ರಿ ಸ್ಥಾನಕ್ಕಿಂತ ತಮ್ಮ ಕುರಿತು ಉಂಟಾಗಿರುವ ತಪ್ಪು ಅಭಿಪ್ರಾಯವನ್ನು ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿ ಎಂದು ಈ ವೇಳೆ ರಾಜಣ್ಣ ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ. ಅದಕ್ಕಾಗಿ ಸಿಎಂ ಭೇಟಿ ಮಾಡಿದ್ದೇನೆ. ಸಿಎಂ ನೋಡೋಣ ಕಾಲ ಬಂದಾಗ ಮಾಡೋಣ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾನು, ನಮ್ಮ ತಂದೆ, ತಾಯಿ ಭದ್ರ ಬುನಾದಿಯಾಗಿದ್ದೇವೆ. ಮಂತ್ರಿ ಸ್ಥಾನ ಸಿಗುವ ವಿಶ್ವಾಸ ಇದೆ. ಸಿಎಂ, ಡಿಸಿವಿ, ಕೆಸಿವಿ, ಸುರ್ಜೇವಾಲಾಗೆ ಮನವಿ ಮಾಡಿದ್ದೇನೆ. ಖರ್ಗೆಯವರಿಗೂ ಮನವಿ ಮಾಡಿದ್ದೇನೆ. ದೇವರು ಇಲ್ಲಿ ಇರಬೇಕಾದ್ರೆ ನಾನು ಬೇರೆ ಎಲ್ಲಿಗೆ ಹೋಗಲಿ, ದೇವರು ಇಲ್ಲೇ ಇದ್ದಾರಲ್ಲ, ಸಿದ್ದರಾಮಯ್ಯನೇ ನಮ್ಮ ದೇವರು, ಡಿಕೆ ಶಿವಕುಮಾರೇ ನಮ್ಮ ದೇವರು ಎಂದು ಹೇಳಿದ್ದಾರೆ.

ನೋಡಿರಿ

