ನಾನು ಕೂಡ ಉ*ಗ್ರಗಾಮಿ, ಕನ್ನಡಿಗರ ವಿರೋಧಿ – ನಮ್ಮ ಮೆಟ್ರೊ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿಯೊಂದಿದೆ. ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಇದನ್ನೂ ಓದಿ: ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ಸಿಗ್ನಲ್! – ಸಿಎಂ ಸಿದ್ದರಾಮಯ್ಯ ಭೇಟಿಯಾದ ಶಾಸಕರು
ಸೋಮವಾರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್ಸಿಎಲ್ ಅಧಿಕೃತ ಇಮೇಲ್ಗೆ ಅನಾಮಿಕನೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದಾನೆ. ಅನಾಮಿಕ ವ್ಯಕ್ತಿ ಕಳಿಸಿದ ಇ-ಮೇಲ್ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆ. ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.
ಬಿಎಂಆರ್ಸಿಎಲ್ ಬೆದರಿಕೆ ಸಂದೇಶ ಬರುತ್ತಿದ್ದಂತೆ ಬಿಎಂಆರ್ಸಿಎಲ್ ಅಧಿಕಾರಿಗಳು ಕೂಡಲೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ನೋಡಿರಿ

